ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಕೊಲೆ ನಡೆದಿದೆ. ಹಾಡಹಗಲೇ ಮಹಿಳೆಯನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿ ಪರಾರುಯಾಗಿರುವ ಘಟನೆ ನಡೆದಿದೆ.
ಬೆಂಗಳೂರು ಉತ್ತರ ತಾಲೂಕಿನ ಕುದುರಗೆರೆ ಗ್ರಾಮದಲ್ಲಿ ಈ ಕೃತ್ಯ ನಡೆದಿದೆ. ಹಾಡಹಗಲೇ ಮಹಿಳೆಯನ್ನು ಕೊಡಲಿಯಿಂದ ಕೊಚ್ಚಿ ಬರ್ಬರವಾಗಿ ಹತ್ಯೆಗೈದು, ದುಷ್ಕರ್ಮಿಗಳು ಪರಾರಿಯಾಗಿದ್ದಾರೆ.
55 ವರ್ಷದ ದಾಕ್ಷಾಯಣಮ್ಮ ಕೊಲೆಯಾದ ಮಹಿಳೆ. ಘಟನ ಅಸ್ಥಳಕ್ಕೆ ಮಾದನಾಯಕನಹಳ್ಳಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೊಲೆಗೆ ನಿಖರ ಕಾರಣ ತಿಳಿದುಬಂದಿಲ್ಲ.




