ಚಿಕ್ಕಮಗಳೂರು : ನಿಶ್ಚಿತಾರ್ಥವಾದ ಯುವತಿಗೆ ಇನ್ಸ್ಟಾಗ್ರಾಂನಲ್ಲಿ ಮೆಸೇಜ್ ಮಾಡಿ ಕಾಟ ಕೊಟ್ಟ ಯುವಕನನ್ನ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಅತ್ತಿಗನಾಳು ಗ್ರಾಮದ ಬಳಿ ಈ ಘಟನೆ ನಡೆದಿದೆ.
ಕೊಲೆಯಾದ ಯುವಕನನ್ನು ಮಂಜುನಾಥ್ (21) ಎಂದು ಗುರುತಿಸಲಾಗಿದೆ.ಚಾಕು ಇರಿತದಿಂದ ಗಂಭೀರವಾಗಿ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಿಸದೇ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ.
ಮಂಜುನಾಥ್ ಗೆ ಯುವತಿಯೋರ್ವಳ ಪರಿಚಯವಾಗಿತ್ತು. ಆಕೆಗೆ ಬೇರೆ ಹುಡುಗ (ವೇಣು) ಜೊತೆ ಎಂಗೇಜ್ ಮೆಂಟ್ ಆಗಿದ್ದರೂ ಮಂಜುನಾಥ್ ಪದೇ ಪದೇ ಮೆಸೇಜ್ ಮಾಡುತ್ತಿದ್ದನು. ಮೆಸೇಜ್ ಮಾಡಬೇಡ ಎಂದು ಯುವತಿ ಮಂಜುನಾಥ್ ಗೆ ತಿಳಿಸಿದ್ದಳು.ಆದರೂ ಮಂಜುನಾಥ್ ತನ್ನ ಚಾಳಿ ಬಿಡಲಿಲ್ಲ.
ಈ ವಿಷಯವನ್ನ ಯುವತಿ ವೇಣುಗೆ ತಿಳಿಸಿದ್ದಾಳೆ. ಮಾತನಾಡಬೇಕು ಎಂದು ಮಂಜುನಾಥ್ ರನ್ನು ಕರೆಸಿಕೊಂಡ ವೇಣು ಜಗಳ ಮಾಡಿದ್ದಾನೆ.
ಜಗಳ ವಿಕೋಪಕ್ಕೆ ತಿರುಗಿ ಮಂಜುನಾಥ್ ಗೆ ಚಾಕು ಇರಿದಿದ್ದಾನೆ. ಗಂಭೀರವಾಗಿ ಗಾಯಗೊಂಡ ಮಂಜುನಾಥ್ ನನ್ನು ಶಿವಮೊಗ್ಗದ ಮ್ಯಾಕ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಆದರೆ ಯುವಕ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾನೆ. ಈ ಸಂಬಂಧ ತರೀಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.




