ವಿಜಯಪುರ : ನಗರದಲ್ಲಿ ಮತ್ತೆ ಗುಂಡಿನ ಸದ್ದು (Gun Fire)ಕೇಳಿ ಬಂದಿದೆ. 6 ಸುತ್ತು ಗುಂಡು ಹಾರಿಸಿದ್ದಲ್ಲದೆ ಕಲ್ಲು ಎತ್ತಿಹಾಕಿ ಗ್ರಾಮ ಪಂಚಾಯಿತಿ ಸದಸ್ಯನನ್ನು ದುರುಳರು ಭೀಕರವಾಗಿ ಹತ್ಯೆ ಮಾಡಿರುವಂತಹ ಘಟನೆ ವಿಜಯಪುರದ ಹೊರಭಾಗದ ಅಲಿಯಾಬಾದ್ ಬಳಿ ನಡೆದಿದೆ.
ತಾಂಗರುನ ದೊಡ್ಡಿ ನಿವಾಸಿ ರಾಜು ಹತ್ಯೆಗೊಳಗಾದ ವ್ಯಕ್ತಿ. ಸದ್ಯ ಸ್ಥಳಕ್ಕೆ ವಿಜಯಪುರ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.




