This is the title of the web page
This is the title of the web page

Live Stream

September 2023
S M T W T F S
 12
3456789
10111213141516
17181920212223
24252627282930

| Latest Version 9.4.1 |

State News

ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಬರ್ಬರ ಹತ್ಯೆ

Join The Telegram Join The WhatsApp

ಹುಕ್ಕೇರಿ : ಯುವಕನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ತಡರಾತ್ರಿ ನಡೆದಿದೆ. ಕೊಲೆಯಾದ ಯುವಕನನ್ನು ಯಮಕನಮರಡಿ ನಿವಾಸಿ ವಿನಾಯಕ (28) ಎಂದು ಗುರುತಿಸಲಾಗಿದೆ.

ಈತ ಬೈಕ್‌ನಲ್ಲಿ ತನ್ನೂರಿಗೆ ಹೋಗುತ್ತಿದ್ದಾಗ ಹಿಂಬಾಲಿಸಿ ಬಂದ ದುಷ್ಕರ್ಮಿಗಳು ಕೊಚ್ಚಿ ಕೊಲೆ ಮಾಡಿದ್ದಾರೆ. ಪರಿಣಾಮವಾಗಿ ತೀವ್ರ ರಕ್ತಸ್ರಾವದಿಂದ ವಿನಾಯಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಇನ್ನೂ ಶನಿವಾರವಷ್ಟೇ ಈತ ಹುಟ್ಟುಹಬ್ಬ ಆಚರಿಸಿಕೊಂಡಿದ್ದ ಎನ್ನಲಾಗುತ್ತಿದೆ.ಘಟನಾ ಸ್ಥಳಕ್ಕೆ ಯಮಕನಮರಡಿ ಪಿಎಸ್‌ಐ ಬಿ.ವಿ.ನಾಮಗೌಡಾ ಸ್ಥಳಕ್ಕೆ ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ.
ಕಳೆದ ವರ್ಷ ಸತೀಶ್ ಜಾರಕಿಹೊಳಿಯವರ ಆಪ್ತರೊಬ್ಬರ ಮೇಲೆ ಈ ಯುವಕ ನಾಡಪಿಸ್ತೂಲ್’ನಿಂದ ಗುಂಡು ಹಾರಿಸಿ ಎಸ್ಕೆಪ್ ಆಗಿದ್ದನು. ಕೆಲ ತಿಂಗಳ ಹಿಂದಷ್ಟೇ ಜಾಮೀನಿನ ಮೇಲೆ ಹೊರಬಂದಿದ್ದ ಎಂದು ಪೊಲೀಸ್ ಮೂಲಗಳಿಂದ ತಿಳಿದುಬಂದಿದೆ.ಯಮಕನಮರಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ ತನಿಖೆ ಕೈಗೊಂಡಿದ್ದಾರೆ.

ವರದಿ: ಶಿವಾಜಿ ಎನ್ ಬಾಲೇಶಗೋಳ


Join The Telegram Join The WhatsApp
Bharath Vaibhav
the authorBharath Vaibhav

Leave a Reply