Ad imageAd image

ಕಲಬುರಗಿಯಲ್ಲಿ ಮಾಜಿ ಸಚಿವ ರೇವೂನಾಯಕ ಬೆಳಮಗಿ ಅಳಿಯನ ಬರ್ಬರ ಹತ್ಯೆ  

Bharath Vaibhav
ಕಲಬುರಗಿಯಲ್ಲಿ ಮಾಜಿ ಸಚಿವ ರೇವೂನಾಯಕ ಬೆಳಮಗಿ ಅಳಿಯನ ಬರ್ಬರ ಹತ್ಯೆ  
WhatsApp Group Join Now
Telegram Group Join Now

ಕಲಬುರಗಿ : ನಗರದ ಹೃದಯಭಾಗದಲ್ಲಿರುವ ಪಿ ಆಂಡ್ ಟಿ ಕಾಲೋನಿಯ ವೆಂಕಟೇಶ್ವರ ಕಾಂಪ್ಲೆಕ್ಸ್‌ನಲ್ಲಿ ತಡರಾತ್ರಿ ಮಾಜಿ ಸಚಿವ ರೇವೂನಾಯಕ ಬೆಳಮಗಿ ಅವರ ಅಳಿಯನ ಸಹೋದರ ಅನಿಲ್ ರಾಠೋಡ್ (45) ಅವರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ.ಈ ಘಟನೆಯು ಕಲಬುರಗಿ ನಗರದಲ್ಲಿ ಭಾರಿ ಆತಂಕ ಮತ್ತು ಸಂಚಲನ ಮೂಡಿಸಿದೆ.

ಅನಿಲ್ ರಾಠೋಡ್ ಅವರು ವೆಂಕಟೇಶ್ವರ ಕಾಂಪ್ಲೆಕ್ಸ್‌ನಲ್ಲಿರುವ ತಮ್ಮ ಕಚೇರಿಯಲ್ಲಿದ್ದಾಗ, ಆಟೋದಲ್ಲಿ ಬಂದ ಮೂವರು ದುಷ್ಕರ್ಮಿಗಳ ತಂಡ ನೇರವಾಗಿ ಕಚೇರಿ ಒಳಗೆ ನುಗ್ಗಿದೆ.

ಯಾವುದೇ ಮುನ್ಸೂಚನೆ ಇಲ್ಲದೆ ಮಾರಕಾಸ್ತ್ರಗಳಿಂದ ಅನಿಲ್ ಅವರ ಮೇಲೆ ಮನಬಂದಂತೆ ಹಲ್ಲೆ ನಡೆಸಿದ್ದು, ತೀವ್ರ ರಕ್ತಸ್ರಾವದಿಂದ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕೃತ್ಯ ಎಸಗಿದ ಬಳಿಕ ಹಂತಕರು ಅದೇ ಆಟೋದಲ್ಲಿ ಸ್ಥಳದಿಂದ ಪರಾರಿಯಾಗಿದ್ದಾರೆ

WhatsApp Group Join Now
Telegram Group Join Now
- Advertisement -  - Advertisement -  https://www.youtube.com/@BVNEWS5/videos
Share This Article
error: Content is protected !!