ಹುಬ್ಬಳ್ಳಿ: ರೇಣುಕಸ್ವಾಮಿ ಕೊಲೆ ಗಂಭೀರ ಪ್ರಕರಣವಾಗಿದ್ದು ಈ ಪ್ರಕರಣದಲ್ಲಿ ಆರೋಪಿಗಳಿಗೆ ಶಿಕ್ಷೆ ಸಿಗುವವರೆಗೂ ಅಧಿಕಾರಿಗಳು ಚುರುಕುತನ, ನಿಯತ್ತಿನ ತನಿಖೆ ನಡೀಬೇಕು ಎಂದು ಮಾಜಿ ಸಿಎಂ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಹುಬ್ಬಳ್ಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಅಮಾನವೀಯವಾಗಿ ವರ್ತಿಸುವ ಅಧಿಕಾರ ಯಾರಿಗೂ ಇಲ್ಲ. ಅಧಿಕಾರದಲ್ಲಿ ಇರುವವರು ಇರಬಹುದು, ಸೆಲೆಬ್ರಿಟಿ ಆಗಬಹುದು. ಯಾರಿಗೂ ವಿಶೇಷ ಅಧಿಕಾರ ಇಲ್ಲ. ಕಾನೂನಿನ ಮುಂದೆ ನಾವೆಲ್ಲರೂ ಸಮಾನರು. ಕಾನೂನನ್ನು ಕೈಗೆ ತೆಗೆದುಕೊಳ್ಳುವುದೇ ಅಪರಾಧ. ಅದು ಮರ್ಡರ್ ಆಗುವ ಮಟ್ಟಕ್ಕೆ ಹೋದರೆ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಳ್ಳಬೇಕು ಎಂದು ಹೇಳಿದರು.
ಕೊಲೆಯಲ್ಲಿ ಹಲವಾರು ರೀತಿ ಇವೆ. ಇದು ಕಾನ್ಫರೆಸಿ ಮಾಡಿ ಮರ್ಡರ್ ಮಾಡಿರುವ ಪ್ರಕರಣ. ಇದೊಂದು ಗಂಭೀರ ಪ್ರಕರಣ, ದರ್ಶನ್ ಪ್ರಕರಣದಲ್ಲಿ ಆರಂಭದಲ್ಲಿ ತನಿಖೆ ಚುರುಕಾಗಿ ನಡೀತಿದೆ. ಕೊನೆಯವರೆಗೂ ಇದೇ ಚುರುಕುತನ, ನಿಯತ್ತು ತನಿಖೆಯಲ್ಲಿರಬೇಕು. ಹಾಗಾದಾಗ ಮಾತ್ರ ತಪ್ಪಿತಸ್ಥರಿಗೆ ಶಿಕ್ಷೆಯಾಗುತ್ತದೆ ಎಂದು ಹೇಳಿದರು.
ವರದಿ :ಸುಧೀರ್ ಕುಲಕರ್ಣಿ