ಬೆಂಗಳೂರು : ಪರಿಶಿಷ್ಟ ಜಾತಿಯಲ್ಲಿ ಒಳ ಮೀಸಲು ಕಲ್ಪಿಸುವ ಸಲುವಾಗಿ ದತ್ತಾಂಶ ಸಂಗ್ರಹ ಉದ್ದೇಶದೊಂದಿಗೆ ನಿವೃತ್ತ ನ್ಯಾ| ಎಚ್.ಎನ್ ನಾಗಮೋಹನ್ ದಾಸ್ ನೇತೃತ್ವದ ಆಯೋಗ ಸೋಮವಾರದಿಂದ ಸಮೀಕ್ಷೆ ಆರಂಭಿಸಲಿದೆ.
ಗೌರವಾನ್ವಿತ ನ್ಯಾಯಮೂರ್ತಿಗಳಾದ ಶ್ರೀ ಹೆಚ್ ಎನ್ ನಾಗಮೋಹನ ದಾಸ್ ಇವರ ಏಕ ಸದಸ್ಯ ವಿಚಾರಣಾ ಆಯೋಗದಿಂದ ಪರಿಶಿಷ್ಟ ಜಾತಿಯ ಒಳ ಮೀಸಲಾತಿ ಕುರಿತು ದತ್ತಾಂಶ ಸಂಗ್ರಹಿಸಲು ಸರ್ಕಾರದಿಂದ ನಡೆಸಲು ಉದ್ದೇಶಿಸಿರುವ ಸಮೀಕ್ಷಾ ಕಾರ್ಯವನ್ನು ಸರ್ಕಾರದ ಅಗತ್ಯ ಕಾರ್ಯವೆಂದು ಪರಿಗಣಿಸಿ, ಕರಾರುವಕ್ಕಾದ ಪ್ರಮಾಣೀಕೃತ ಮಾಹಿತಿಯನ್ನು ಪಡೆಯುವ ಸಲುವಾಗಿ ಸಮೀಕ್ಷಾ ಕಾರ್ಯಕ್ಕೆ ಶಿಕ್ಷಕರನ್ನು ಗಣತಿದಾರರನ್ನಾಗಿ ಗುರುತಿಸಲು ಹಾಗೂ ಅದರೊಂದಿಗೆ ೫.10 ರಷ್ಟು ಶಿಕ್ಷಕರನ್ನು ಹೆಚ್ಚುವರಿಯಾಗಿ ಕಾಯ್ದಿರಿಸಲು ಹಾಗೂ 10 ರಿಂದ 12 ಗಣತಿದಾರರಿಗೆ ಓರ್ವ ಮೇಲ್ವಿಚಾರಕರನ್ನು ಗುರುತಿಸಲು ಆದೇಶಿಸಿದೆ.