ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಸಾರಿಗೆ ನೌಕರರು ಮತ್ತೆ ಮುಷ್ಕರಕ್ಕೆ ಮುಂದಾಗಿದ್ದಾರೆ. ಡಿಸೆಂಬರ್ 31 ರಿಂದ ಸಾರಿಕೆ ಮುಷ್ಕರಕ್ಕೆ ಈಗಗಲೇ ಸಾರಿಗೆ ನೌಕರರ ಹಿರಿಯ ಮುಖಂಡ ಅನಂತ ಸುಬ್ಬರಾವ್ ಕರೆ ನೀಡಿದ್ದಾರೆ.
ಬೆಳಗಾವಿಯಲ್ಲಿ ಡಿಸಿಎಂಬರ್ 9ರಿಂದ ಚಳಿಗಾಲದ ಅಧಿವೇಶನ ನಡೆಯಲಿದ್ದು, ಅಂದು ಸಾರಿಗೆ ನೌಕರರು ಬೆಳಗಾವಿ ಚಲೋ ಮೂಲಕ ಸರ್ಕರಕ್ಕೆ ಬಿಸಿಮುಟ್ಟಿಸಲಿದ್ದಾರೆ.ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ನೋಟಿಸ್ ನೀಡಲಾಗುತ್ತದೆ.
ಕೈಗಾರಿಕಾ ವಿವಾದ ಕಾಯಿದೆ ಸೆಕ್ಷನ್ 27ರ ಪ್ರಕಾರ ಮುಷ್ಕರಕ್ಕೂ ಮುನ್ನ 21 ದಿನಗಳ ಮೊದಲು ನೋಟಿಸ್ ನೀಡಬೇಕು. ಹಾಗಾಗಿ ಡಿಸೆಂಬರ್ 9ರಂದು ನೋಟಿಸ್ ನೀಡಲಾಗುತ್ತಿದೆ. ಬಳಿಕ ಡಿಸೆಂಬರ್ 31ರಿಂದ ಸಾರಿಗೆ ಮುಷ್ಕರ ಆರಂಭಿಸಲಾಗುತ್ತದೆ.
6 ಸಾರಿಗೆ ನೌಕರರ ಸಂಘಟನೆಗಳ ಒಕ್ಕೂಟ ಸೇರಿ ಜಂಟಿ ಕ್ರಿಯಾ ಸಮಿತಿ ಮಾಡಿಕೊಂಡಿದ್ದು, 6 ಸಂಘಟನೆಗಳು ಮುಷ್ಕರಕ್ಕೆ ಬೆಂಬಲ ಘೋಷಿಸಿವೆ. ಸಾರಿಗೆ ನೌಕರರ ಬೇಡಿಕೆಗಳನ್ನು ಸರ್ಕಾರ ನಿರ್ಲಕ್ಷ್ಯ ಮಾಡಿದರೆ ಸಾರಿಗೆ ಸಂಚಾರ ಸಂಪೂರ್ಣ ಸ್ಥಗಿತಗೊಳ್ಳಲಿದೆ ಎಂದು ಸಾರಿಗೆ ನೌಕರರು ಎಚ್ಚರಿಕೆ ನೀಡಿದ್ದಾರೆ.