Ad imageAd image

ಬೆಳಗಾವಿ, ಧಾರವಾಡ, ಮೈಸೂರು ಸೇರಿ ಬೆಳ್ಳಂ ಬೆಳಿಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ 

Bharath Vaibhav
ಬೆಳಗಾವಿ, ಧಾರವಾಡ, ಮೈಸೂರು ಸೇರಿ ಬೆಳ್ಳಂ ಬೆಳಿಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ 
WhatsApp Group Join Now
Telegram Group Join Now

ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಅಧಿಕಾರಿಗಳು ಬೆಳ್ಳಂ ಬೆಳಿಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಶಾಕ್ ನೀಡಿದ್ದಾರೆ.

ಬೆಳಗಾವಿ, ಮೈಸೂರು, ಧಾರವಾದ, ಬೀದರ್ ನಲ್ಲಿ ಲೋಕಾಯುಕ್ತ ಅಧಿಕಾರಿಗಳು ಏಕಕಾಲದಲ್ಲಿ ದಾಳಿ ನಡೆಸಿದ್ದು, ಹಲವು ಅಧಿಕಾರಿಗಳ ಮನೆಯಲ್ಲಿ ದಾಖಲೆ ಪರಿಶೀಲನೆ ನಡೆಸಿದ್ದಾರೆ.

ಬೆಳಗಾವಿಯಲ್ಲಿ ಬೋರಗಾಂವ್ ಗ್ರಾಮ ಲೆಕ್ಕಾಧಿಕಾರಿ ವಿಠ್ಠಲ ಡವಳೇಶ್ವರ ಮನೆ, ಕಚೇರಿ ಮೇಲೆ ದಾಳಿ ನಡೆಸಲಾಗಿದೆ. ಮೈಸೂರಿನಲ್ಲಿ ನಗರ ಪಾಲಿಕೆ ವಲಯ ಆಯುಕ್ತ ನಾಗೇಶ್ ಮನೆ ಮೇಲೆ ದಾಳಿ ನಡೆಸಿದ್ದಾರೆ.

ಶ್ರೀರಂಗಪಟ್ಟಣದ, ಧಾರವಾದದಲ್ಲಿಯೂ ಭ್ರಷ್ಟ ಅಧಿಕಾರಿಗಳ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.ಬೀದರ್ ನಲ್ಲಿ ಜಿಲ್ಲಾ ತರಬೇತಿ ಕೇಂದ್ರದ ಅಧಿಕಾರಿ ರವೀಂದ್ರ ರೊಟ್ಟೆ ಮನೆ, ಕಚೇರಿ ಮೇಲೆ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!