ಅಥಣಿ : ಮೊಟ್ಟಮೊದಲ ಬಾರಿಗೆ ಅಥಣಿ ಪೊಲೀಸ್ ಠಾಣೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಬೆಳಗಾವಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ ರಾಮರಾಜನ್ ಅವರು ಠಾಣೆಯ ಕಾರ್ಯವೈಖರಿ ಸಿಬ್ಬಂದಿಗಳ ಕರ್ತವ್ಯ ನಿರ್ವಹಣೆ ಹಾಗೂ ಸಾರ್ವಜನಿಕರಿಗೆ ನೀಡಲಾಗುತ್ತಿರುವ ಸೇವೆಗಳ ಬಗ್ಗೆ ಸಮಗ್ರವಾಗಿ ಪರಿಶೀಲನೆ ನಡೆಸಿದರು.
ಈ ವೇಳೆ ಠಾಣೆಯ ದಾಖಲೆಗಳನ್ನು ಪರಿಶೀಲಿಸಿದ ಎಸ್ ಪಿ ಭೆಟ್ಟಿ ಅವರು ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಪೊಲೀಸ್ ಸಿಬ್ಬಂದಿಗಳು ಇನ್ನಷ್ಟು ಜಾಗರೂಕರಾಗಿ ಕಾರ್ಯನಿರ್ವಹಿಸಬೇಕು ಎಂದು ಸೂಚನೆ ನೀಡಿದರು ಸಾರ್ವಜನಿಕರೊಂದಿಗೆ ಸ್ನೇಹಪರವಾಗಿ ವರ್ತಿಸುವುದು ಸಾರ್ವಜನಿಕರಿಂದ ಬರುವ ದೂರುಗಳಿಗೆ ತಕ್ಷಣ ಸ್ಪಂದನೆ ನೀಡುವುದು ಹಾಗೂ ಅಪರಾಧ ತಡೆಗಟ್ಟುವಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ನಿರ್ದೇಶನ ನೀಡಿದರು.
ಅಥಣಿ ಪೊಲೀಸ್ ಠಾಣೆಯ ಸಿಬ್ಬಂದಿಗಳ ಕಾರ್ಯನಿರ್ವಹಣೆಯನ್ನು ಮೆಚ್ಚಿದ ಅವರು, ಮುಂದಿನ ದಿನಗಳಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವಲ್ಲಿ ಇನ್ನಷ್ಟು ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸುವಂತೆ ಕರೆ ನೀಡಿದರು.
ಈ ಸಂದರ್ಭದಲ್ಲಿ ಡಿವೈಎಸ್‌ಪಿ ಪ್ರಶಾಂತ ಮುನ್ನೊಳಿ ಸಿಪಿಐ ಸಂತೋಷ ಹಳ್ಳೂರ, ಪಿಎಸ್ಐ ಉಪ್ಪಾರ ಸೇರಿದಂತೆ ಪೊಲೀಸ್ ಉಪನಿರೀಕ್ಷಕರು ಹಾಗೂ ಠಾಣೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.
ವರದಿ : ಸುಕುಮಾರ ಮಾದರ




