ಬೆಳಗಾವಿ : ಕ್ಯಾನ್ಸರ್ ಆಸ್ಪತ್ರೆ ರಾಷ್ಟ್ರಪತಿಯವರ ಹಸ್ತದಿಂದ ಉದ್ಘಾಟಿಸಲಾಯಿತು. ಕರ್ನಾಟಕ ಸರ್ಕಾರ ಲೋಕೋಪಯೋಗಿ ಸಚಿವರು ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಸನ್ಮಾನ್ಯ ಶ್ರೀ ಸತೀಶ ಅಣ್ಣಾ ಜಾರಕಿಹೊಳಿಯವರು ಬೆಳಗಾವಿ ನಗರದಲ್ಲಿ ಕೆಎಲ್‌ಇ ಸೊಸೈಟಿಯು ನಿರ್ಮಿಸಿರುವ ವಿಶ್ವಮಟ್ಟದ ಕ್ಯಾನ್ಸರ್ ಚಿಕಿತ್ಸೆ ಮತ್ತು ಆರೈಕೆಗಾಗಿ ಅತ್ಯಾಧುನಿಕ ಆಸ್ಪತ್ರೆಯನ್ನು ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರ ಜೊತೆ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಕೇಂದ್ರ ಸಚಿವರಾದ ಶ್ರೀ ಪ್ರಹ್ಲಾದ ಜೋಶಿ, ಕೆಎಲ್ಇ ಸಂಸ್ಥೆಯ ಡಾ. ಪ್ರಭಾಕರ್ ಕೋರೆ, ಸಚಿವರಾದ ಶ್ರೀ ಶರಣಪ್ರಕಾಶ ಪಾಟೀಲ, ಸಂಸದರಾದ ಶ್ರೀ ಜಗದೀಶ ಶೆಟ್ಟರ್, ಶಾಸಕರು ಹಾಗೂ ಕೆಎಲ್ಇ ಸಂಸ್ಥೆಯ ಅಧ್ಯಕ್ಷರಾದ ಶ್ರೀ ಮಹಾಂತೇಶ ಕೌಜಲಗಿ ಸೇರಿ ಅನೇಕ ಗಣ್ಯರು ಉಪಸ್ಥಿತರಿದ್ದರು.
ವರದಿ ರಾಜು ಮುಂಡೆ