ಬೆಳಗಾವಿ: ಅಕ್ರಮ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದ ನಟೋರಿಯಸ್ ಮೂವರು ಆರೋಪಿಗಳಿಗೆ ಬೆಳಗಾವಿ ಪೊಲೀಸ್ ಕಮೀಷನರ್ ಭೂಷಣ್ ಬೊರಸೆ ಗಡಿಪಾರು ಆದೇಶ ಹೊರಡಿಸಿದ್ದಾರೆ.
ಯುಗಾದಿ ಹಬ್ಬದ ದಿನವೇ ಮೂವರು ಆರೋಪಿಗಳನ್ನು ನಗರ ಹಾಗೂ ಜಿಲ್ಲೆಯ ವ್ಯಾಪ್ತಿಯಿಂದ ಹೊರಗೆ ಗಡಿಪಾರು ಮಾಡುವಂತೆ ಆದೇಶಿಸಲಾಗಿದೆ.
ಮಟ್ಕಾ ಜೂಜಾಟ, ಗಾಂಜಾ ಸೇರಿದಂತೆ ವಿವಿಧ ಅಕ್ರಮ ಚಟುವಟಿಕೆಗಳಲ್ಲಿ ತೊಡಗಿದ್ದ ಆರೋಪಿಗಳ ವಿರುದ್ಧ ಈ ಕ್ರಮ ಕೈಗೊಳ್ಳಲಾಗಿದೆ.
ಗಡಿಪಾರುಗೊಳಗಾದವರನ್ನು ಸರ್ಫರಾಜ್ ಶೇಖ್, ವಿನಾಯಕ ಕೊಲ್ಲಾಪುರಿ ಹಾಗೂ ಸಾಗರ ಸಾಲಗುಡೆ ಎಂದು ಗುರುತಿಸಲಾಗಿದೆ. ಇವರ ವಿರುದ್ಧ ಹಲವು ಪ್ರಕರಣಗಳು ದಾಖಲಾಗಿದ್ದರೂ, ಪದೇ ಪದೇ ಎಚ್ಚರಿಕೆ ನೀಡಿದರೂ ಚಟುವಟಿಕೆ ನಿಲ್ಲಿಸಿರಲಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಹಿನ್ನೆಲೆ ಮೂವರನ್ನೂ ಕ್ರಮವಾಗಿ ವಿಜಯಪುರ, ಕಾರವಾರ ಹಾಗೂ ಯಾದಗಿರಿ ಜಿಲ್ಲೆಗಳ ವ್ಯಾಪ್ತಿಗೆ 6 ತಿಂಗಳ ಕಾಲ ಗಡಿಪಾರು ಮಾಡಲಾಗಿದೆ.
ಬೆಳಗಾವಿ ನಗರದ ಕಾನೂನು ಸುವ್ಯವಸ್ಥೆ ಕಾಪಾಡಲು ಪೊಲೀಸರು ಈ ಕಠಿಣ ಕ್ರಮ ಕೈಗೊಂಡಿದ್ದಾ ರೆ.ಮಟ್ಕಾ ಜೂಜಾಟ, ಗಾಂಜಾ ಸೇರಿದಂತೆ ವಿವಿಧ ಅಕ್ರಮ ಚಟುವಟಿಕೆಗಳಲ್ಲಿ ತೊಡಗಿದ್ದ ಆರೋಪಿಗಳ ವಿರುದ್ಧ ಈ ಕ್ರಮ ಕೈಗೊಳ್ಳಲಾಗಿದೆ.




