Ad imageAd image

ಶಾಸಕರ ಜತೆ ಮಾತುಕತೆ ನಡೆಸಿ ಬೆಳಗಾವಿ ಜಿಲ್ಲೆ ವಿಭಜನೆ : ಸಿದ್ದರಾಮಯ್ಯ

Bharath Vaibhav
ಶಾಸಕರ ಜತೆ ಮಾತುಕತೆ ನಡೆಸಿ ಬೆಳಗಾವಿ ಜಿಲ್ಲೆ ವಿಭಜನೆ : ಸಿದ್ದರಾಮಯ್ಯ
siddaramaiah
WhatsApp Group Join Now
Telegram Group Join Now

ಬೆಳಗಾವಿ : ಬೆಳಗಾವಿ ಜಿಲ್ಲೆ ವಿಭಜನೆ ಮಾಡುವ ಕುರಿತಂತೆ ಸಿಎಂ ಸಿದ್ದರಾಮಯ್ಯ ಮಹತ್ವದ ಹೇಳಿಕೆ ನೀಡಿದ್ದು, ಬೆಳಗಾವಿ ಜಿಲ್ಲೆ ವಿಭಜನೆ ಕುರಿತು ಮಾತುಕತೆ ನಡೆಸಲಾಗುವುದು ಎಂದು ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಳಗಾವಿ ಜಿಲ್ಲೆ ದೊಡ್ಡ ಜಿಲ್ಲೆಯಾಗಿದ್ದು, ಅದನ್ನು ವಿಭಜನೆ ಮಾಡುವ ಕುರಿತು ಶಾಸಕರ ಜತೆ ಮಾತುಕತೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ.

ಇನ್ನು ದರ್ಶನ್‌ ವಿಚಾರದಲ್ಲಿ ಅಧಿಕಾರಿಗಳಿಂದ ಲೋಪ ಉಂಟಾಗಿದ್ದು, ಈಗಾಗಲೇ ಸಂಬಂಧಪಟ್ಟಂತೆ 7 ಮಂದಿಯನ್ನು ಅಮಾನತು ಮಾಡಲಾಗಿದೆ. ಇನ್ನೂ ಕೆಲವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಅಧಿಕಾರಿಗಳ ಮಟ್ಟದಲ್ಲಿ ನಡೆದಿರುವ ಲೋಪ ಇದಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನೂ ಕೆಲವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು.

ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುವಂತೆ ಗೃಹ ಸಚಿವರಿಗೆ ಸೂಚಿಸಿದ್ದು, ಅವರ ವರದಿ ಆಧಾರದಲ್ಲಿ ಸೂಕ್ತ ಕ್ರಮ ಜರುಗಿಸಲಾಗುವುದು ಎಂದರು. ದರ್ಶನ ಬೇರೆ ಜೈಲಿಗೆ ಸ್ಥಳಾಂತರ ಮಾಡಬೇಕಾ ಬೇಡವೇ ಎಂಬ ಬಗ್ಗೆಯೂ ನಿರ್ಧಾರ ಕೈಗೊಳ್ಳಲಾಗುವುದು ಎಂದರು.

 

 

WhatsApp Group Join Now
Telegram Group Join Now
- Advertisement -  - Advertisement -  - Advertisement - 
Share This Article
error: Content is protected !!