Ad imageAd image

ಬೆಳಗಾವಿ ಜಿಲ್ಲಾ ವಿಭಜನೆ ಯಾವುದೇ ಸಂದರ್ಭದಲ್ಲಾದರೂ ಘೋಷಣೆ: ಸಚಿವ ಸತೀಶ್ ಜಾರಕಿಹೊಳಿ 

Bharath Vaibhav
ಬೆಳಗಾವಿ ಜಿಲ್ಲಾ ವಿಭಜನೆ ಯಾವುದೇ ಸಂದರ್ಭದಲ್ಲಾದರೂ ಘೋಷಣೆ: ಸಚಿವ ಸತೀಶ್ ಜಾರಕಿಹೊಳಿ 
WhatsApp Group Join Now
Telegram Group Join Now

ಬೆಳಗಾವಿ: ರಾಜ್ಯದಲ್ಲೇ ದೊಡ್ಡ ಜಿಲ್ಲೆಯಾಗಿರುವ ಬೆಳಗಾವಿ ಜಿಲ್ಲೆಯನ್ನು ಆಡಳಿತಾತ್ಮಕ ದೃಷ್ಟಿಯಿಂದ ವಿಭಜನೆಗೊಳಿಸಿ ಮೂರು ಜಿಲ್ಲೆಯನ್ನಾಗಿಸಬೇಕಿದೆ. ಬೆಳಗಾವಿ, ಚಿಕ್ಕೋಡಿ ಮತ್ತು ಗೋಕಾಕನ್ನು ಜಿಲ್ಲೆಯನ್ನಾಗಿ ಘೋಷಿಸಬೇಕು. ಜಿಲ್ಲಾ ವಿಭಜನೆ ಘೋಷಣೆಯನ್ನು ಯಾವ ಸಂದರ್ಭದಲ್ಲಾದರೂ ಘೋಷಣೆ ಮಾಡಬಹುದು ಎಂದು ಸಚಿವ ಸತೀಶ್ ಜಾಅರಕಿಹೊಳಿ ತಿಳಿಸಿದ್ದಾರೆ.

ಜಿಲ್ಲಾ ವಿಭಜನೆ ಯಾವುದೇ ಸಂದರ್ಭದಲ್ಲಿ ಘೋಷಿಸಬಹುದು. ಆದರೆ, ಅದು ಪೂರ್ಣಪ್ರಮಾಣದಲ್ಲಿ ಜಾರಿಯಾಗಬೇಕಾದರೆ ಐದು ವರ್ಷ ಅವಧಿಬೇಕಾಗುತ್ತದೆ. ಬೆಳಗಾವಿ ಜಿಲ್ಲೆಯನ್ನು ವಿಭಜಿಸಿ, ಮೂರು ಜಿಲ್ಲೆಯನ್ನಾಗಿ ಮಾಡಿದರೆ ಯಾವುದೇ ಸಮಸ್ಯೆ ಇಲ್ಲ. ಈ ನಿಟ್ಟಿನಲ್ಲಿ ಸರ್ಕಾರ ನಿರ್ಧರಿಸಬೇಕು ಎಂದರು.

ಜೆ.ಎಚ್.ಪಟೇಲ್ ಅವಧಿಯಲ್ಲಿ ಬೆಳಗಾವಿ ಜಿಲ್ಲೆ ವಿಭಜಿಸಿ, ಚಿಕ್ಕೋಡಿ ಮತ್ತು ಗೋಕಾಕನ್ನು ಜಿಲ್ಲೆಯನ್ನಾಗಿ ಘೋಷಿಸಿ, ಗಜೆಟ್ ಹೊರಡಿಸಲಾಗಿತ್ತು. ಆಗ ಆ ಭಾಗದ ಜನರು ಸಂಭ್ರಮಾಚರಣೆ ಮಾಡಿದ್ದರು. ಆದರೆ, ಅದನ್ನು ರದ್ದುಗೊಳಿಸಲಾಯಿತು ಎಂದು ತಿಳಿಸಿದರು.

ರಾಜ್ಯದ ವಿವಿಧೆಡೆ ಒಟ್ಟು 42 ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಕೈಗೊಳ್ಳಲಾಗಿದ್ದು, ಈ ಪೈಕಿ 27 ಕಾಮಗಾರಿ ಪೂರ್ಣಗೊಂಡಿವೆ ಎಂದು ಇದೇ ವೇಳೆ ಸಚಿವರು ತಿಳಿಸಿದ್ದಾರೆ.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!