ಬಳ್ಳಾರಿ:ದಿನಾಂಕ 2 ರಂದು ಕೆಪಿವೈಸಿಸಿ ಪ್ರಧಾನ ಕಾರ್ಯದರ್ಶಿಗಳಾದ ರಾಹುಲ ಜಾರಕಿಹೊಳಿ ಅವರು ಬಳ್ಳಾರಿ ನಗರದಲ್ಲಿ ಜರುಗಿದ ಬಳ್ಳಾರಿ ಗ್ರಾಮೀಣ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಜಿಲ್ಲಾ ಕಾರ್ಯಕಾರಿಣಿ ಸಭೆಯಲ್ಲಿ ಪಾಲ್ಗೊಂಡು, ಪಕ್ಷ ಸಂಘಟನೆಯ ಕುರಿತು ಮಾತನಾಡಿದರು.

ಈ ಸಂದರ್ಭದಲ್ಲಿ ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಉಸ್ತುವಾರಿ ನಿಗಮ್ ಭಂಡಾರಿ, ಕೆಪಿವೈಸಿಸಿ ಅಧ್ಯಕ್ಷ ಮಂಜುನಾಥ್ ಗೌಡ, ಆನಂದ ಕೋಣೇರಿ ಹಾಗೂ ಪ್ರಮುಖ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.
ಇದಕ್ಕೂ ಮುನ್ನ ಬಳ್ಳಾರಿ ನಗರಕ್ಕೆ ಆಗಮಿಸಿದ್ದ ಸಂದರ್ಭದಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರು ಅದ್ದೂರಿಯಾಗಿ ಸ್ವಾಗತಿಸಿದರು. ನಂತರ ಹಮ್ಮಿಕೊಂಡಿದ್ದ ಬೈಕ್ ರ್ಯಾಲಿಯಲ್ಲಿ ಭಾಗವಹಿಸಿದರು.
ವರದಿ :ರಾಜು ಮುಂಡೆ




