ಮುದಗಲ್ಲ : ಅಸ್ಪೃಶ್ಯತೆ ಮತ್ತು ಅಸಮಾನತೆಯ ಆಂದೋಲನ ಪ್ರಾರಂಭಿಸಿ ಶೋಷಿತ ವರ್ಗಕ್ಕೆ ನ್ಯಾಯ ಒದಗಿಸಲು ಮಹಾನ್ ಹೋರಾಟ ನಡೆಸಿದ ದೇಶದ ಮಹಾನಾಯಕ ಭಾರತ ರತ್ನ ಬಾಬಾ ಸಾಹೇಬ್ ಡಾ. ಬಿ.ಆರ್. ಅಂಬೇಡ್ಕರ್ 133 ನೇ ಜಯಂತಿ ಯನ್ನು ಸ್ಥಳೀಯ ಪುರಸಭೆ ವತಿಯಿಂದ ಆಚರಣೆ ಮಾಡಲಾಯಿತು
ಸಂವಿಧಾನ ಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ್ ಅವರ ನೇ ಜಯಂತಿ ಕಾರ್ಯಕ್ರಮದಲ್ಲಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಭಾವಚಿತ್ರ ಕ್ಕೆ ಮುಖ್ಯಾಧಿಕಾರಿ ನಭಿಸಾಬ ಕಂದಗಲ್ಲ ಹಾಗೂ ದಲಿತ ಸಮುದಾಯದ ನಾಯಕರು ಪುಷ್ಪನಮನ ಸಲ್ಲಿಸಿದರು..
ಈ ಸಂದರ್ಭದಲ್ಲಿ ಮುಖ್ಯಾಧಿಕಾರಿ ನಭಿಸಾಬ ಕಂದಗಲ್ಲ ಅವರು ಮಾತನಾಡಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಯಾವುದೇ ಒಂದು ಸಮುದಾಯಕ್ಕೆ ಸೀಮಿತರಲ್ಲ, ಅವರು ದೇಶಕ್ಕೆ ಸಂವಿಧಾನವನ್ನು ನೀಡಿದ ಸಮಿತಿಯ ಅಧ್ಯಕ್ಷರಾಗಿ, ಸಮಾಜಶಾಸ್ತ್ರಜ್ಞರಾಗಿ, ಅರ್ಥಶಾಸ್ತ್ರಜ್ಞರಾಗಿ, ಇತಿಹಾಸಕಾರರಾಗಿ ಹೀಗೆ ಅವರಿಗೆ ತಿಳಿಯದ ಕ್ಷೇತ್ರವಿರಲಿಲ್ಲ ಎಂದು ನುಡಿದರು. ಹಿಂದುಳಿದವರನ್ನು ಸಮಾಜದ ಮುಖ್ಯ ವಾಹಿನಿಗೆ ಕರೆತರುವ ಎಲ್ಲರ ಜೊತೆಗೆ ಕರೆದೊಯ್ಯುವ ಉದ್ದೇಶ ಅವರದಾಗಿತ್ತು ಎಂದರು.
ಈ ಸಂದರ್ಭದಲ್ಲಿ :- ಪುರಸಭೆ ಯ ಮುಖ್ಯಾಧಿಕಾರಿ ನಭಿಸಾಬ ಕಂದಗಲ್ಲ , ಹಾಗೂ ಸಿಬ್ಬಂದಿಗಳಾದ ಚನ್ನಮ್ಮ , ಪವನ್ ಕುಮಾರ್, ರವಿಕುಮಾರ್, ಹಾಗೂ ದಲಿತ ಸಮಾಜದ ಮುಖಂಡರಾದ ಶರಣಪ್ಪ ಕಟ್ಟಿಮನಿ, ವೆಂಕಟೇಶ್ ಹಿರೇಮನಿ, ಬಸವರಾಜ ಬಂಕದಮನಿ,ಕೃಷ್ಣ ಚಲುವಾದಿ,ಹುಲ್ಲಗಪ್ಪ ಚಲುವಾದಿ, ಮದಿನಾ ಟ್ರೇಡರ್ಸ್ ಮಾಲಿಕರಾದ ಟಿಪ್ಪು , ಬಸವರಾಜ , ಹಾಗೂ ಸಮಾಜದ ಮುಖಂಡರು ಉಪಸ್ಥಿತರಿದ್ದರು..
ವರದಿ: ಮಂಜುನಾಥ ಕುಂಬಾರ