ಬೆಂಗಳೂರು : ಸಾಮಾಜಿಕ ಸಮಾನತೆ, ಅಸ್ಪೃಶ್ಯತಾ ಏಕತೆಗೆ ಹೋರಾಡಿದ ಮಹಾನ್ ಚೇತನ ಭಾರತ ರತ್ನ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಆದರ್ಶಗಳು ಇಂದಿಗೂ ಸಮಾಜಕ್ಕೆ ದಾರಿದೀಪವಾಗಿವೆ ಎಂದು ಚಿಂತಕರು ವಾಗ್ಮಿಗಳು ಬುದ್ದಿಜೀವಿಗಳು ಮತ್ತು ರಾಷ್ಟ್ರೀಯ ಅಂತಾರಾಷ್ಟ್ರೀಯ ಪ್ರಶಸ್ತಿ ಪುರಸ್ಕೃತರಾದ ಡಾ. ಸಂಗನ ಬಸಪ್ಪ ಬಿರಾದಾರ್ ಹೇಳಿದರು.
ಅವರು ದಾಸರಹಳ್ಳಿ ವಿಧಾನಸಭಾ ಕ್ಷೇತ್ರದ ಹೆಗ್ಗನಹಳ್ಳಿ ಮುಖ್ಯ ರಸ್ತೆ ಬಸ್ ನಿಲ್ದಾಣ ಹತ್ತಿರ ಡಾ ಬಿ ಆರ್ ಅಂಬೇಡ್ಕರ್ ಅಭಿಮಾನಿಗಳ ವೇದಿಕೆ ಸಂಸ್ಥಾಪಕ ರಾಜ್ಯಾಧ್ಯಕ್ಷ ಉಮೇಶ್ ಗೌಡ ರಾವಣ್ ಅವರ ನೇತೃತ್ವದಲ್ಲಿ ಆಯೋಜಿಸಿದ್ದ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರ 135ನೇ ಜನ್ಮದಿನಾಚರಣೆ ಅಂಗವಾಗಿ ಡಾ. ಬಿ ಆರ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಗೌರವ ನಮನ ಸಲ್ಲಿಸಿ ಮೆರವಣಿಗೆಗೆ ತಯಾರಿಯಾಗಿ ನಿಂತಿರುವ ಬೆಳ್ಳಿ ರಥ ವಾಹನಕ್ಕೆ ಚಾಲನೆ ನೀಡಿ ಡಾ. ಬಿರಾದಾರ್ ನೆನದ್ದಿದ ಜನರನ್ನು ಉದ್ದೇಶಿಸಿ ಮಾತನಾಡಿದರು.
ಜನ ವಿಕಾಸ ಕೋ ಆಪರೇಟಿವ್ ಸೊಸೈಟಿ ಸಂಸ್ಥಾಪಕ ಅಧ್ಯಕ್ಷ ದಯಾನಂದ್ ಸಂವಿಧಾನ ಶಿಲ್ಪಿ ಡಾ. ಬಿ ಆರ್ ಅಂಬೇಡ್ಕರ್ ಅವರ ವಾಣಿಗಳನ್ನು ಮನುಷ್ಯನ ಬದುಕಿಗೆ ಪ್ರೇರಣೆ ಎಂದು ಡಾ. ಬಿ ಆರ್ ಅಂಬೇಡ್ಕರ್ ಅವರ ಬಾಲ್ಯ ಜೀವನ ಅವರ ಕೊಡಿಗೆ ಬಗ್ಗೆ ಎಳೆ ಎಳೆಯಾಗಿ ಸಾರ್ವಜನಿಕರಿಗೆ ತಿಳಿಸಿ ಕೊಟ್ಟರು.
ಡಾ ಬಿ ಆರ್ ಅಂಬೇಡ್ಕರ್ ಅಭಿಮಾನಿಗಳ ವೇದಿಕೆಯ ಸಂಸ್ಥಾಪಕ ರಾಜ್ಯಾಧ್ಯಕ್ಷ ಉಮೇಶ್ ಗೌಡ ರಾವಣ್ ಸರ್ವರಿಗೂ ಸ್ವಾಗತಿಸಿದರು.
ಈ ಸಂದರ್ಭದಲ್ಲಿ ಡಾ.ಬಿ ಆರ್ ಅಂಬೇಡ್ಕರ್ ಅಭಿಮಾನಿಗಳ ವೇದಿಕೆಯ ಪದಾಧಿಕಾರಿಗಳು ಸದಸ್ಯರು, ಕಾರ್ಮಿಕ ಸಂಘಟನೆಯ ಮುಖಂಡ ಚೆನ್ನಕೇಶವ, ಇಸ್ಲಾಂ ಸಮಾಜದ ಯುವ ಮುಖಂಡ ಇಮಾಮ್ ಸೇರಿದಂತೆ ವಿವಿಧ ಸಂಘಟನೆಗಳ ಮುಖಂಡರು ಮಹಿಳೆಯರು ಕಾರ್ಯಕರ್ತರು ಸಮಸ್ತ ನಾಗರಿಕ ಬಂಧು ಭಗನಿಯರು ಉಪಸ್ಥಿತರಿದ್ದರು.
ವರದಿ : ಅಯ್ಯಣ್ಣ ಮಾಸ್ಟರ್




