Ad imageAd image
- Advertisement -  - Advertisement -  - Advertisement - 

ಬೆಳಗಾವಿ ಗ್ರಾಮಂತರ ಜಿಲ್ಲಾ ಕಾರ್ಯಾಲಯದಲ್ಲಿ ಭಾರತೀಯ ಜನತಾ ಪಾರ್ಟಿ ಸದಸ್ಯತಾ ಅಭಿಯಾನದ ಕಾರ್ಯಾಗಾರ

Bharath Vaibhav
ಬೆಳಗಾವಿ ಗ್ರಾಮಂತರ ಜಿಲ್ಲಾ ಕಾರ್ಯಾಲಯದಲ್ಲಿ ಭಾರತೀಯ ಜನತಾ ಪಾರ್ಟಿ ಸದಸ್ಯತಾ ಅಭಿಯಾನದ ಕಾರ್ಯಾಗಾರ
WhatsApp Group Join Now
Telegram Group Join Now

ಸೆಪ್ಟೆಂಬರ್ 2 ರಿಂದ ಭಾರತೀಯ ಜನತಾ ಪಾರ್ಟಿ ಸದಸ್ಯತಾ ಅಭಿಯಾನ : ಸುಭಾಷ್ ಪಾಟೀಲ

ಬೆಳಗಾವಿ : ನಗರದ ಭಾರತೀಯ ಜನತಾ ಪಾರ್ಟಿ ಗ್ರಾಮಾಂತರ ಜಿಲ್ಲೆಯ ಕಚೇರಿಯಲ್ಲಿ ನಡೆದ ಬಿಜೆಪಿ ಸದಸ್ಯತಾ ಅಭಿಯಾನದ ಕಾರ್ಯಾಗಾರವನ್ನು ಭಾ.ಜ.ಪಾ ಗ್ರಾಮಾಂತರ ಜಿಲ್ಲಾಧ್ಯಕ್ಷರಾದ ಸುಭಾಷ್ ಪಾಟೀಲ ಅವರು ಉದ್ಘಾಟಿಸಿದರು. ನಂತರ ಮಾತನಾಡಿದ ಅವರು ಭಾರತೀಯ ಜನತಾ ಪಾರ್ಟಿ ಒಂದು ಪಕ್ಷವಾಗಿ ಸಂಘಟನೆಯನ್ನು ಬಲಪಡಿಸಲು ಅನೇಕ ಆಂತರಿಕ ಪ್ರಜಾಸತ್ತಾತ್ಮಕ ಪ್ರಕ್ರಿಯೆಗಳನ್ನು ನಡೆಸುತ್ತಿರುತ್ತದೆ. ಇದಕ್ಕಾಗಿಯೇ ಬಿಜೆಪಿಯನ್ನು “ಪಾರ್ಟಿ ವಿತ್ ಡಿಫರೆನ್ಸ್” ಎನ್ನುವುದು.

ಸದಸ್ಯತಾ ಅಭಿಯಾನವು ಅಂತಹ ಒಂದು ಸಂಘಟನಾತ್ಮಕ ಪ್ರಕ್ರಿಯೆಯಾಗಿದೆ.2 ನೇ ಸಪ್ಟೆಂಬರ್ 2024 ರಂದು ಸೋಮವಾರ ದೆಹಲಿಯಲ್ಲಿ ಸನ್ಮಾನ್ಯ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿಜಿ ಅವರು ಸದಸ್ಯತಾ ಅಭಿಯಾನಕ್ಕೆ ಚಾಲನೆ ನೀಡುವರು. ಎಲ್ಲ ಪದಾಧಿಕಾರಿಗಳು ಹಾಗೂ ಭಾರತೀಯ ಜನತಾ ಪಾರ್ಟಿಯ ಕಾರ್ಯಕರ್ತರು ತಮ್ಮ ತಮ್ಮ ಮಂಡಲಗಳಲ್ಲಿ ತಮ್ಮ ತಮ್ಮ ಬೂತ್ ಗಳಲ್ಲಿ ಸದಸ್ಯತಾ ಅಭಿಯಾನದಲ್ಲಿ ಭಾಗವಹಿಸಿ ಈ ಸದಸ್ಯತಾ ಅಭಿಯಾನವನ್ನು ಯಶಸ್ವಿಗೊಳಿಸಬೇಕೆಂದು ಕರೆ ನೀಡಿದರು. ಭಾರತೀಯ ಜನತಾ ಪಾರ್ಟಿ ಓಬಿಸಿ ಮೋರ್ಚಾ ರಾಜ್ಯ ಉಪಾಧ್ಯಕ್ಷರಾದ ವಿವೇಕಾನಂದ ಡಬ್ಬಿ ಹಾಗೂ ಮಾಜಿ ಶಾಸಕ ವಿಶ್ವನಾಥ್ ಪಾಟೀಲ್ ಮಾತನಾಡಿ ಭಾ.ಜ.ಪಾ ಸದಸ್ಯತಾ ಅಭಿಯಾನ ಪಕ್ಷದ ಬಲವರ್ಧನೆಗೆ ಹಾಗೂ ಮುಂಬರುವ ಜಿಲ್ಲಾ ಹಾಗೂ ತಾಲೂಕ ಪಂಚಾಯಿತಿ ಹಾಗೂ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಸಹಕಾರಿಯಾಗಲಿದೆ ಎಂದು ಹೇಳಿದರು.ಇದೇ ವೇಳೆ ಶ್ಯಾಮಪ್ರಸಾದ್ ಮುಖರ್ಜಿ ಹಾಗೂ ದೀನ್ ದಯಾಳ್ ಉಪಾಧ್ಯಾಯ ಅವರ ತ್ಯಾಗ ಹಾಗೂ ಬಲಿದಾನದ ಬಗ್ಗೆ ಸ್ಮರಿಸಲಾಯಿತು. ಸದಸ್ಯತಾ ಅಭಿಯಾನದ ಬೆಳಗಾವಿ ಗ್ರಾಮಂತರ ಜಿಲ್ಲೆಯ ಪ್ರಭಾರಿಗಳಾದ ದಾದಾ ಗೌಡ ಬಿರಾದರ್ ಅವರು ಸದಸ್ಯತಾ ಅಭಿಯಾನದ ಕುರಿತು ಮಾಹಿತಿಯನ್ನು ನೀಡಿದರು.ಇದೇ ವೇಳೆ ಸದಸ್ಯತಾ ಅಭಿಯಾನದ ಮಿಸ್ ಕಾಲ್ ನೀಡುವ ಮೊಬೈಲ್ ಸಂಖ್ಯೆಯನ್ನು ಬಿತ್ತಿ ಪತ್ರದ ಮೂಲಕ ಬಿಡುಗಡೆಗೊಳಿಸಲಾಯಿತು.

ಈ ಸಂದರ್ಭದಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಸಂದೀಪ್ ದೇಶಪಾಂಡೆ, ಧನಶ್ರೀ ದೇಸಾಯಿ, ಡಾ. ಕೆ ವಿ ಪಾಟೀಲ್, ರಾಜ್ಯ ಸಾಮಾಜಿಕ ಜಾಲತಾಣ ಸದಸ್ಯ ನಿತಿನ್ ಚೌಗಲೆ, ಯುವ ಮೋರ್ಚಾ ರಾಜ್ಯ ಉಪಾಧ್ಯಕ್ಷ ಈರಣ್ಣ ಅಂಗಡಿ, ಸೋನಾಲಿ ಸರ್ನೋಬತ್, ವಿರುಪಾಕ್ಷ ಮಾಮನಿ, ಸದಸ್ಯತಾ ಅಭಿಯಾನದ ಜಿಲ್ಲಾ ಸಹ ಸಂಚಾಲಕರಾದ ಪ್ರಶಾಂತ್ ಅಮ್ಮಿನಭಾವಿ, ಚೇತನ್ ಅಂಗಡಿ, ವೀರಭದ್ರ ಪೂಜಾರಿ, ಬಸವರಾಜ್ ನೇಸರಗಿ, ಮಹೇಶ್ ಮೋಹಿತೆ ಜಿಲ್ಲೆಯ ಹಾಗೂ ಮಂಡಲದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

ವರದಿ : ಪ್ರತೀಕ ಚಿಟಗಿ

WhatsApp Group Join Now
Telegram Group Join Now
Share This Article
error: Content is protected !!