ಬೀದರ: ಮಹಿಳೆಯರು ಮತ್ತು ಮಕ್ಕಳ ಮೇಲಿನ ದೌರ್ಜನ್ಯ ತಡೆಗಟ್ಟುವ ನಿಟ್ಟಿನಲ್ಲಿ ಕರ್ನಾಟಕ ಸರ್ಕಾರ ಆರಂಭಿಸಿರುವ ಬೀದರ ಜಿಲ್ಲಾ ಪೊಲೀಸ್ ಅಕ್ಕ ಪಡೆ ಈಗಾಗಲೇ ರಾಜ್ಯಕ್ಕೆ ಮಾದರಿಯಾಗಿ ಗುರುತಿಸಿಕೊಂಡಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಈಶ್ವರ ಖಂಡ್ರೆ ಹೇಳಿದರು.

ಇಂದು ಅಕ್ಕ ಪಡೆಗೆ ನಿಯೋಜಿಸಲಾದ ವಾಹನಕ್ಕೆ ಸಚಿವರು ಚಾಲನೆ ನೀಡಿ ಮಾತನಾಡಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ನೇತೃತ್ವದಲ್ಲಿ ಪೊಲೀಸ್ ಸಿಬ್ಬಂದಿ ಹಾಗೂ ತರಬೇತಿ ಪಡೆದ ಎನ್‌ಎಸ್‌ಸಿ ಕೆಡೆಟ್‌ಗಳೊಂದಿಗೆ ಕಾರ್ಯನಿರ್ವಹಿಸುತ್ತಿರುವ ಅಕ್ಕ ಪಡೆ, ಸಾರ್ವಜನಿಕ ಸ್ಥಳಗಳಲ್ಲಿ ಗಸ್ತು ತಿರುಗುವ ಮೂಲಕ ಮಹಿಳೆಯರು ಮತ್ತು ಮಕ್ಕಳಿಗೆ ಸುರಕ್ಷತೆ ಒದಗಿಸುತ್ತಿದೆ ಎಂದು ತಿಳಿಸಿದರು.

ಸಮಾಜದಲ್ಲಿ ಸುರಕ್ಷತೆ ಮತ್ತು ಜಾಗೃತಿಯ ಕಿರು ಸೇತುವೆಯಾಗಿ ಅಕ್ಕ ಪಡೆ ಕಾರ್ಯನಿರ್ವಹಿಸುತ್ತಿದ್ದು, ಮಹಿಳಾ ಸಬಲೀಕರಣದ ದಿಕ್ಕಿನಲ್ಲಿ ಇದು ಮಹತ್ವದ ಹೆಜ್ಜೆಯಾಗಿದೆ ಎಂದು ಸಚಿವರು ಹೇಳಿದರು.
ವರದಿ:ಸಂತೋಷ ಬಿಜಿ ಪಾಟೀಲ್




