ಬೆಂಗಳೂರು: ಬಿಜೆಪಿ ರಾಜ್ಯ ಘಟಕದ ನೂತನ ಅಧ್ಯಕ್ಷರಾಗಿ BY ಬಿ.ವೈ.ವಿಜಯೇಂದ್ರ ಅವರನ್ನು ಆಯ್ಕೆ ಮಾಡಲಾಗಿದೆ. ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಹೆಚ್ಚು ಸೀಟು ಗೆಲ್ಲದ ಹಿನ್ನಲೆಯಲ್ಲಿ ನಳೀನು ಕುಮಾರ್ ಕಟೀಲ್ ಅವರನ್ನು ಬದಲಾವಣೆ ಮಾಡಲಾಗುವುದು ಎನ್ನಲಾಗುತಿತ್ತು, ಅದಕ್ಕೆ ಈಗ ಫುಲ್ ಸ್ಟಾಪ್ ಬಿದಿದ್ದೆ.
ಈ ನಡುವೆ ಮುಂಬರುವ ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಹೈಕಮಾಂಡ್ ಬಿ ಬೈ ವಿಜಯೇಂದ್ರ ಅವರನ್ನು ಆಯ್ಕೆ ಮಾಡಿದೆ ಎನ್ನಲಾಗಿದೆ.
ಇವರು ಕರ್ನಾಟಕದ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಪುತ್ರ. ಅವರು ಈ ಹಿಂದೆ ಭಾರತೀಯ ಜನತಾ ಯುವ ಮೋರ್ಚಾದ ಕರ್ನಾಟಕ ಘಟಕದ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದರು.
ಅವರು ಶಿಕ್ಷಣದಿಂದ ವಕೀಲರಾಗಿದ್ದು, ಈ ಹಿಂದೆ ವಕೀಲರಾಗಿ ಸ್ವಲ್ಪ ಸಮಯ ಕೆಲಸ ಮಾಡಿದ್ದರು. ಸದ್ಯ ಇವರು ಶಿಕಾರಿ ಪುರದ ಶಾಸಕರಾಗಿದ್ದಾರೆ.