ಹುಬ್ಬಳ್ಳಿ : ರೆಬಲ್ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಬಿಜೆಪಿ ಕೇಂದ್ರೀಯ ಶಿಸ್ತು ಸಮಿತಿಯು 6 ವರ್ಷಗಳಕಾಲ ಉಚ್ಚಾಟನೆ ಮಾಡಿರುವುದನ್ನು ಶ್ರೀರಾಮ ಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅವರು ವಿರೋಧಿಸಿದ್ದಾರೆ.
ಈ ಕುರಿತು ಪ್ರತಿಕ್ರಿಯೆ ನೀಡಿರುವ ಅವರು, ಉಚ್ಚಾಟನೆಯಿಂದ ಬಿಜೆಪಿಗೆ ದೊಡ್ಡ ಡ್ಯಾಮೇಜ್ ಆಗಲಿದೆ.ಉಚ್ಚಾಟನೆ ವಿಚಾರವನ್ನು ಬಿಜೆಪಿ ಹೈಕಮಾಂಡ್ ಮರು ಪರಿಶೀಲನೆ ಮಾಡಿದರೆ ಪಕ್ಷಕ್ಕೆ ಒಳ್ಳೇಯದ್ದು ಎಂದು ಸಲಹೆ ನೀಡಿದ್ದಾರೆ.
ಉಚ್ಚಾಟನೆ ನಿರ್ಧಾರವನ್ನು ಒಪ್ಪಲು ಸಾಧ್ಯವಿಲ್ಲ. ಯತ್ನಾಳ್ ಅವರು ಹಿಂದುತ್ವದ ಗಟ್ಟಿ ಧ್ವನಿಯಾಗಿದ್ದು, ಅವರನ್ನೇ ಉಚ್ಚಾಟನೆ ಮಾಡಿರುವುದು ಪಕ್ಷಕ್ಕೆ ದೊಡ್ಡ ನಷ್ಟವಾಗಲಿದೆ ಎಂದು ಎಚ್ಚರಿಕೆ ನೀಡಿದ್ದಾರೆ.
ಯತ್ನಾಳ್ ಉಚ್ಚಾಟನೆಯಿಂದ ನಮಗೆ ತೀವ್ರ ನೋವು ತಂದಿದೆ. ಹೈಕಮಾಂಡ್ ಕೂಡಲೇ ಈ ನಿರ್ಧಾರ ಬದಲಿಸಿ, ಅವರನ್ನು ಮತ್ತೆ ಪಕ್ಷಕ್ಕೆ ಕರೆಯಬೇಕು ಎಂದು ಆಗ್ರಹಿಸಿದ್ದಾರೆ.
ಅತ್ತ ಪಂಚಮಸಾಲಿ ಸಮುದಾಯದ ಬಸವ ಜಯಮೃತ್ಯುಂಜಯ ಶ್ರೀಗಳು ಉಚ್ಚಾಟನೆಯನ್ನು ವಾಪಸ್ ಪಡೆಯದಿದ್ದರೆ ಉಗ್ರ ಹೋರಾಟದ ಎಚ್ಚರಿಕೆಯನ್ನು ನೀಡಿದ್ದು ಗೊತ್ತೇ ಇದೆ.