Ad imageAd image

ಬೆಳಗಾವಿಯ ಸುವರ್ಣಸೌಧದಲ್ಲಿ ಬೃಹತ್ ‘ಮಹತ್ಮಾ ಗಾಂಧೀಜಿ’ ಪುತ್ಥಳಿ ಅನಾವರಣ

Bharath Vaibhav
ಬೆಳಗಾವಿಯ ಸುವರ್ಣಸೌಧದಲ್ಲಿ ಬೃಹತ್ ‘ಮಹತ್ಮಾ ಗಾಂಧೀಜಿ’ ಪುತ್ಥಳಿ ಅನಾವರಣ
WhatsApp Group Join Now
Telegram Group Join Now

ಬೆಳಗಾವಿ : ಬೆಳಗಾವಿಯಲ್ಲಿ ಇಂದು 1924ರಲ್ಲಿ ನಡೆದ ಮಹಾತ್ಮ ಗಾಂಧೀಜಿ ಅಧ್ಯಕ್ಷತೆಯಲ್ಲಿ ನಡೆದ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಕಾರ್ಯಕ್ರಮದಲ್ಲಿ ಮಹತ್ಮಾ ಗಾಂಧೀಜಿ ಪ್ರತಿಮೆ ಅನಾವರಣಗೊಳಿಸಲಾಗಿದೆ.

ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ, ಪಕ್ಷದ ಸಂಸದ ಪ್ರಿಯಾಂಕಾ ಗಾಂಧಿ ವಾದ್ರಾ ಬೆಳಗಾವಿಗೆ ತಲುಪಿದರು; ವಿಮಾನ ನಿಲ್ದಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಬರಮಾಡಿಕೊಂಡರು. ಅವರು ಇಲ್ಲಿ ಪಕ್ಷದ ‘ಜೈ ಬಾವು, ಜೈ ಭೀಮ್, ಜೈ ಸಂವಿಧಾನ್’ ರ್ಯಾಲಿಯಲ್ಲಿ ಭಾಗವಹಿಸಲಿದ್ದಾರೆ.

ಮಹಾತ್ಮ ಗಾಂಧೀಜಿಯವರ ಅಧ್ಯಕ್ಷತೆ ವಹಿಸಿದ್ದ 1924ರ ಕಾಂಗ್ರೆಸ್ ಅಧಿವೇಶನಕ್ಕೆ ನೂರು ವರ್ಷಗಳು ಪೂರ್ಣಗೊಳ್ಳುತ್ತಿರುವ ಹಿನ್ನಲೆಯಲ್ಲಿ ಶತಮಾನೋತ್ಸವ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸುವ ಮೂಲಕ ಮಹಾತ್ಮ ಗಾಂಧೀಜಿಯವರ ತತ್ವಾದರ್ಶಗಳನ್ನು ದೇಶದ ಪ್ರತಿಯೊಬ್ಬರಿಗೆ ಪರಿಚಯಿಸುವ ಕಾರ್ಯಕ್ರಮಗಳನ್ನು ರೂಪಿಸಲಾಗಿದೆ ಅಧಿವೇಶನದಲ್ಲಿ ಭಾಗವಹಿಸಲು ದೇಶದ ವಿವಿಧ ಭಾಗಗಳಿಂದ ಕಾಂಗ್ರೆಸ್ ನಾಯಕರು ದಂಡೇ ಹರಿದು ಬಂದಿದ. ಎಎಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ, ಸಂಸದ ಪ್ರಿಯಾಂಕಾ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೇರಿದಂತೆ ಹಲವು ನಾಯಕರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!