Ad imageAd image

BIG NEWS : ಬಿಜೆಪಿಯಲ್ಲಿ ಅತೃಪ್ತರು ಫುಲ್ ಆ್ಯಕ್ಟಿವ್ 

Bharath Vaibhav
BIG NEWS : ಬಿಜೆಪಿಯಲ್ಲಿ ಅತೃಪ್ತರು ಫುಲ್ ಆ್ಯಕ್ಟಿವ್ 
WhatsApp Group Join Now
Telegram Group Join Now

ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ಮಹತ್ವದ ರಾಜಕೀಯ.. ಬೆಳವಣಿಗೆ ನಡೆದಿದೆ. ಬಿಜೆಪಿಯ ನಾಯಕರಾದ ಬಸನಗೌಡ ಪಾಟೀಲ್ ಯತ್ನಾಳ್, ರಮೇಶ್ ಜಾರಕಿಹೊಳಿ, ಮಾಜಿ ಸಂಸದ ಪ್ರತಾಪ್ ಸಿಂಹ, ಮಾಜಿ ಸಚಿವ ಕುಮಾರ್ ಬಂಗಾರಪ್ಪ ಸಭೆ ನಡೆಸಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ನಾಯಕತ್ವಕ್ಕೆ ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.ಅತೃಪ್ತ ನಾಯಕರು ಸಭೆ ನಡೆಸಿರುವುದು ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದೆ.

ಬೆಂಗಳೂರಿನ ಸದಾಶಿವನಗರದಲ್ಲಿರುವ ಕುಮಾರ್ ಬಂಗಾರಪ್ಪ ನಿವಾಸದಲ್ಲಿ ನಾಯಕರು ಸಭೆ ನಡೆಸಿದ್ದು, ರಾಜ್ಯ ರಾಜಕೀಯ ಬೆಳವಣಿಗೆಗಳ ಕುರಿತು ಚರ್ಚೆ ನಡೆಸಿದ್ದಾರೆ.

ಮತ್ತೊಂದಿಷ್ಟು ಅತೃಪ್ತ ನಾಯಕರನ್ನು ಸೇರಿಸಿಕೊಂಡು ಇನ್ನೊಂದು ಸಭೆ ನಡೆಸಿ ವಿಜಯೇಂದ್ರ ಬಣದ ವಿರುದ್ಧ ಪಕ್ಷದ ವರಿಷ್ಠರಿಗೆ ದೂರು ನೀಡಲು ಪ್ಲಾನ್ ಮಾಡಿಕೊಂಡಿದ್ದಾರೆ. ಇನ್ನು ಮೈಸೂರು ಪಾದಯಾತ್ರೆಯಲ್ಲಿ ಭಾಗವಹಿಸದಿರಲು ನಾಯಕರು ಸಭೆಯಲ್ಲಿ ಚರ್ಚೆ ನಡೆಸಿದ್ದಾರೆ ಎಂದು ಹೇಳಲಾಗಿದೆ.

WhatsApp Group Join Now
Telegram Group Join Now
- Advertisement -  - Advertisement -  - Advertisement - 
Share This Article
error: Content is protected !!