Ad imageAd image

BIG NEWS : ಸಿದ್ದರಾಮಯ್ಯ ಬಿಗ್ ರಿಲೀಫ್

Bharath Vaibhav
BIG NEWS : ಸಿದ್ದರಾಮಯ್ಯ ಬಿಗ್ ರಿಲೀಫ್
siddaramaiah
WhatsApp Group Join Now
Telegram Group Join Now

ಬೆಂಗಳೂರು : ವಿಚಾರಣೆ ಮುಗಿಯುವವರೆಗೂ CM ಸಿದ್ದರಾಮಯ್ಯವಿರುದ್ಧ ಕ್ರಮ ಕೈಗೊಳ್ಳದಂತೆ ವಿಚಾರಣಾ ನ್ಯಾಯಾಲಯಕ್ಕೆ ಹೈಕೋರ್ಟ್ ಸೂಚನೆ ನೀಡಿದೆ.

ಮುಡಾ ಪ್ರಕರಣದಲ್ಲಿ ತನ್ನ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರು ಅನುಮತಿ ನೀಡಿದ್ದನ್ನು ಪ್ರಶ್ನಿಸಿ ಹೈಕೋರ್ಟ್ ನಲ್ಲಿ ರಿಟ್ ಅರ್ಜಿ ಸಲ್ಲಿಸಲಾಗಿತ್ತು.

ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಪೀಠದ ಸಿದ್ದರಾಮಯ್ಯ ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಯಿತು. ಸಿಎಂ ಪರವಾಗಿ ಸುಪ್ರೀಂ ಕೋರ್ಟ್‌ ಹಿರಿಯ ವಕೀಲ ಅಭಿಷೇಕ್ ಮನು ಸಂಘ್ವಿ ವಾದ ಮಂಡಿಸಿದರು.

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ)ದಲ್ಲಿ ತಮ್ಮ ಕುಟುಂಬಸ್ಥರಿಗೆ ಬದಲಿ ನಿವೇಶನಗಳ ಹಂಚಿಕೆಗೆ ಸಂಬಂಧಿಸಿದಂತೆ ಅಧಿಕಾರ ದುರ್ಬಳಕೆ ಮತ್ತು ಭ್ರಷ್ಟಾಚಾರ ನಡೆಸಿರುವ ಆರೋಪದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ರಾಜ್ಯಪಾಲರ ಕ್ರಮ ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಯ ವಿಚಾರಣೆ ವೇಳೇ ಹೈಕೋರ್ಟ್‌ ವಿಚಾರಣೆ ಮುಗಿಯುವವರೆಗೂ CM ಸಿದ್ದರಾಮಯ್ಯ ವಿರುದ್ಧ ಕ್ರಮ ಕೈಗೊಳ್ಳದಂತೆ ವಿಚಾರಣಾ ನ್ಯಾಯಾಲಯಕ್ಕೆ ಹೈಕೋರ್ಟ್ ಸೂಚನೆ ನೀಡಿದೆ.

 

 

 

WhatsApp Group Join Now
Telegram Group Join Now
- Advertisement -  - Advertisement -  - Advertisement - 
Share This Article
error: Content is protected !!