Join The Telegram | Join The WhatsApp |
ಬೆಳಗಾವಿ : ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ, ಬೆಂಗಳೂರು ಇವರ ಆದೇಶದಂತೆ ನಕಲಿ ದಾಖಲಾತಿಗಳನ್ನು ನೀಡಿ, ಗುರುತಿನ ಚೀಟಿ ಪಡೆದು ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಲ್ಲದ ಫಲಾನುಭವಿಗಳ ಕಾರ್ಡಗಳನ್ನು ರದ್ದು ಪಡಿಸಲು ಜಿಲ್ಲೆಯಲ್ಲಿ ಫೆಬ್ರುವರಿ 25 ರವರೆಗೆ ರದ್ದತಿ ಅಭಿಯಾನ ಹಮ್ಮಿಕೊಳ್ಳಲಾಗಿದೆ.
ನಕಲಿ ದಾಖಲೆ ಸೃಷ್ಟಿಸಿ ಗುರುತಿನ ಚೀಟಿ ಪಡೆದಿರುವ ಕಟ್ಟಡ ಕಾರ್ಮಿಕರಲ್ಲದ ಫಲಾನುಭವಿಗಳು ತಮ್ಮ ಸ್ವ-ಇಚ್ಛೆಯಿಂದ ಎಲ್ಲಾ ತಾಲ್ಲೂಕಿನ ಕಾರ್ಮಿಕ ನಿರೀಕ್ಷಕರ ಕಛೇರಿಗೆ ಹೋಗಿ ಮೂಲ ಗುರುತಿನ ಚೀಟಿಗಳನ್ನು ಸಲ್ಲಿಸಲು ಸೂಚಿಸಿದೆ.
ಇಲ್ಲವಾದಲ್ಲಿ ಕಾರ್ಮಿಕ ನಿರೀಕ್ಷಕರು ಖುದ್ದು ಸ್ಥಳ ಪರಿಶೀಲನೆ ನಡೆಸಿ ನಕಲಿ ದಾಖಲೆ ಸೃಷ್ಟಿಸಿ ಗುರುತಿನ ಚೀಟಿ ಪಡೆದ ಮತ್ತು ಸೌಲಭ್ಯಗಳನ್ನು ಪಡೆದ ಫಲಾನುಭವಿಗಳ ವಿರುದ್ದ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಕಾರ್ಮಿಕ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Join The Telegram | Join The WhatsApp |