ಸಿರುಗುಪ್ಪ : ನಗರದ ಗುರುಭವನದಲ್ಲಿ ಸಾವಿತ್ರಿಬಾಯಿ ಪುಲೆ ರಾಷ್ಟ್ರೀಯ ಶಿಕ್ಷಕಿಯರ ಪೆಡರೇಷನ್(ರಿ) ನವದೆಹಲಿ, ಕರ್ನಾಟಕ ಸಾವಿತ್ರಿಬಾಯಿ ಪುಲೆ ಶಿಕ್ಷಕಿಯರ ಸಂಘ(ರಿ) ರಾಜ್ಯ ಘಟಕ ಧಾರವಾಡ, ಜಿಲ್ಲಾ ಮತ್ತು ತಾಲೂಕು ಘಟಕಗಳ ಸಹಯೋಗದಲ್ಲಿ ನಡೆದ ಅಕ್ಷರದವ್ವ ಮಾತೆ ಸಾವಿತ್ರಿ ಬಾಯಿ ಪುಲೆಯವರ ಜನ್ಮ ದಿನಾಚರಣೆ ಕಾರ್ಯಕ್ರಮವನ್ನು ಶಾಸಕ ಬಿ.ಎಮ್.ನಾಗರಾಜ ಅವರು ಉದ್ಘಾಟಿಸಿದರು.
ಹೆಣ್ಣುಮಕ್ಕಳಿಗೆ ಶಿಕ್ಷಣವನ್ನು ನಿಷಿದ್ದಗೊಳಿಸಿದ್ದ ಕಾಲದಲ್ಲಿ ಶಿಕ್ಷಣವನ್ನು ಪಡೆದು ಮೊದಲ ಮಹಿಳಾ ಶಿಕ್ಷಕಿಯಾಗಿ ಮಕ್ಕಳಿಗೆ ಶಿಕ್ಷಣವನ್ನು ನೀಡುವಂತಹ ಗಟ್ಟಿ ನಿರ್ಧಾರವನ್ನು ತೆಗೆದುಕೊಂಡ ಸಾವಿತ್ರಿಬಾಯಿ ಪುಲೆಯವರ ಸಾಧನೆಯನ್ನು ಮಹಿಳಾ ಶಿಕ್ಷಕಿಯರು ಗಮನಿಸಬೇಕಾಗಿದೆ.
ಹೆಣ್ಣೊಂದು ಕಲಿತರೆ ಶಾಲೆಯೊಂದು ತೆರೆದಂತೆ ಎಂಬ ಗಾದೆಯಂತೆ ಶಾಲೆಯಲ್ಲಿ ಶಿಕ್ಷಕಿಯರಾಗಿರುವ ನೀವೆಲ್ಲಾ ಮಕ್ಕಳನ್ನು ಭೌತಿಕವಾಗಿ, ಮಾನಸಿಕವಾಗಿ, ಶೈಕ್ಷಣಿಕವಾಗಿ ಉನ್ನತ ಗುಣಮಟ್ಟದ ಶಿಕ್ಷಣವನ್ನು ನೀಡುವ ಮೂಲಕ ಅವರ ಆದರ್ಶಗಳನ್ನು ಮೈಗೂಡಿಸಿಕೊಂಡಾಗ ಜನ್ಮದಿನಾಚರಣೆಯ ಕಾರ್ಯಕ್ರಮಕ್ಕೆ ಗೌರವ ಸಲ್ಲಿಸಿದಂತಾಗುತ್ತದೆಂದರು.
ಕಾರ್ಯಕ್ರಮದಲ್ಲಿ ಉತ್ತಮ ಸಾಧನೆಗೈದ ಶಿಕ್ಷಕಿಯರನ್ನು ಸನ್ಮಾನಿಸಲಾಯಿತು.
ಇದೇ ವೇಳೆ ಕ್ಷೇತ್ರ ಸಂಪನ್ಮೂಲ ಅಧಿಕಾರಿ ತಮ್ಮನಗೌಡ ಪಾಟೀಲ್, ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಹುಚ್ಚೀರಪ್ಪ, ತಾಲೂಕು ದೈಹಿಕ ಶಿಕ್ಷಣಾಧಿಕಾರಿ ರಮೇಶ್, ಇಸಿಓ ಹನುಮನಗೌಡ, ವೆಂಕಟೇಶ್, ಇನ್ನಿತರ ಶಿಕ್ಷಕ ವರ್ಗದವರು ಇದ್ದರು.
ವರದಿ : ಶ್ರೀನಿವಾಸ ನಾಯ್ಕ