ಅಥಣಿ :- ಮಹಾತ್ಮ ಗಾಂಧೀಜಿ ಹಾಗೂ ಮಾಜಿ ಪ್ರಧಾನಿ ಲಾಲ ಬಹದ್ದೂರ ಶಾಸ್ತ್ರಿ ಅವರ ಜಯಂತಿ ಅಂಗವಾಗಿ ಕರ್ನಾಟಕ ರಕ್ಷಣಾ ವೇದಿಕೆ ( ಶಿವರಾಮೇಗೌಡ ಬಣ ಸೇನಾನಿಗಳಿಂದ ಇಲ್ಲಿನ ಸರ್ಕಾರಿ ಪ್ರಥಮ ದರ್ಜೆಯ ಪದವಿ ಮಹಾವಿದ್ಯಾಲಯದ ಆವರಣದಲ್ಲಿ ಸ್ವಚ್ಛತಾ ಶ್ರಮದಾನವನ್ನು ಹಮ್ಮಿಕೊಳ್ಳಲಾಯಿತು.
ಮಹಾತ್ಮ ಗಾಂಧೀಜಿ ಹಾಗೂ ಲಾಲ ಬಹದ್ದೂರ ಶಾಸ್ತ್ರಿ ಅವರ ಭಾವಚಿತ್ರಗಳಿಗೆ ಪೂಜೆ ಸಲ್ಲಿಸಿದ ಪದವಿ ಮಹಾವಿದ್ಯಾಲಯದ ಪ್ರಾಚಾರ್ಯ ಡಾ. ಶಾಂತಿನಾಥ ಬಳೋಜ ಮಾತನಾಡಿ ಸತ್ಯ ಶಾಂತಿ, ಅಹಿಂಸಾ ತತ್ವಗಳ ಮೂಲಕ ತಮ್ಮ ಬದುಕಿನದ್ದಕ್ಕೂ ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮಹಾತ್ಮ ಗಾಂಧೀಜಿ ಅವರು ಗ್ರಾಮ ಸ್ವರಾಜ್ಯದ ಕನಸು ಕಂಡವರು. ಅವರು ಬದುಕೇ ಒಂದು ತೆರೆದ ಪುಸ್ತಕವಾಗಿದೆ. ಸರಳ ಸಜ್ಜನಿಕೆಯ ವ್ಯಕ್ತಿತ್ವ ಹೊಂದಿದ್ದ ಮಾಜಿ ಪ್ರಧಾನಿ ಲಾಲ ಬಹದ್ದೂರ್ ಶಾಸ್ತ್ರಿ ಅವರ ನಮ್ಮೆಲ್ಲರಿಗೂ ಆದರ್ಶವಾಗಬೇಕು. ಅವರ ತತ್ವದರ್ಶಗಳನ್ನು ಬದುಕಿನಲ್ಲಿ ಅಳವಡಿಸಿಕೊಳ್ಳುವ ಮೂಲಕ ಸ್ವಚ್ಛ ಭಾರತ ಮತ್ತು ಸದೃಢ ಭಾರತಕ್ಕಾಗಿ ಶ್ರಮಿಸಬೇಕೆಂದು ಕರೆ ನೀಡಿದರು.
ನಂತರ ಕರವೇ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಣ್ಣಾಸಾಬ ತೆಲಸಂಗ ಮಾತನಾಡಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಗ್ರಾಮ ಸ್ವರಾಜ್ಯದ ಕನಸು ನನಸಾಗುವ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಶ್ರಮಿಸಬೇಕು. ಮಾಜಿ ಪ್ರಧಾನಿ ಲಾಲ ಬಹದ್ದೂರು ಶಾಸ್ತ್ರಿ ಅವರು ಸರಳ ಸಜ್ಜನಿಕೆಯ ರಾಜಕಾರಣಿಯಾಗಿ ಜೈ ಜವಾನ್ ಜೈ ಕಿಸಾನ್ ಎಂಬ ಘೋಷಣೆಯ ಮೂಲಕ ದೇಶದ ರೈತರಿಗಾಗಿ ಅನೇಕ ಯೋಜನೆಗಳನ್ನು ರೂಪಿಸಿದವರು. ಕೇವಲ ೧೮ ತಿಂಗಳು ಪ್ರಧಾನಿಯಾಗಿ ಅನೇಕ ರಾಜಕೀಯ ನಾಯಕರಿಗೆ ಇವರು ಪ್ರೇರಣೆಯಾಗಿದ್ದಾರೆ. ಇಂತಹ ಮಹಾತ್ಮರ ಜಯಂತಿಯ ಉತ್ಸವಗಳು ಕೇವಲ ಆಚರಣೆಗೆ ಸೀಮಿತವಾಗದೆ ಅರ್ಥಪೂರ್ಣವಾಗಿ ಆಚರಿಸುವ ಉದ್ದೇಶದಿಂದ ಅವರೇ ನೀಡಿದ ಸಂದೇಶದಂತೆ ಸ್ವಚ್ಛ ಭಾರತ ಅಭಿಯಾನ ಯೋಜನೆಗೆ ಕೈಜೋಡಿಸಬೇಕು ಕರೆ ನೀಡಿದರು.
ನಂತರ ಕರ್ನಾಟಕ ರಕ್ಷಣಾ ವೇದಿಕೆಯ ತಾಲೂಕಾಧ್ಯಕ್ಷ ಉದಯ ಮಕಾಣಿ, ಜಿಲ್ಲಾ ಸಂಚಾಲಕ ಜಗನ್ನಾಥ ಬಾಮನೆ ಮಾತನಾಡಿದರು.ಈ ವೇಳೆ ಸಿದ್ದು ಹಂಡಗಿ, ವಿಜಯ ನೇಮಗೌಡ, ರಾಜು ವಾಘಮಾರೆ, ಪರಶುರಾಮ ಕಾಂಬಳೆ, ಅನಿಲ ಒಡಿಯರ, ವಿದ್ಯಾ ಮರಡಿ, ಹಣಮವ್ವ ದಂಡಗಿ, ಮುತ್ತಣ್ಣ ಗೊಲ್ಲರ, ಸತೀಶ ಯಲ್ಲಟ್ಟಿ,ಡಾ. ಮಹಾಂತೇಶ ಉಕಲಿ, ಶ್ರೀಶೈಲ ದೇವರೆಡ್ಡಿ, ಎಸ್ ವಿ ಕುರುಣಿ, ಡಾ. ಸಾರಾ ರಜಾಕ್, ಪ್ರೋ. ಕೋಟ್ಯಾಳ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದ
ವರದಿ: -ರಾಜು ವಾಘಮಾರೆ.