ಬಿಟ್ ಕಾಯಿನ್ ಹಗರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಸೇರಿ ದೇಶದ 60 ಕಡೆ ಸಿಬಿಐ ದಾಳಿ ನಡೆಸಿದೆ. ಬೆಂಗಳೂರು, ಪುಣೆ, ಚಂಡೀಗಢ, ದೆಹಲಿ ಎನ್‌ಸಿಆರ್, ನಾಂದೇಡ್, ಕೊಲ್ಲಾಪುರ ಸೇರಿದಂತೆ ಹಲವೆಡೆ ಸಿಬಿಐ ದಾಳಿ ನಡೆಸಿ ಶೋಧಕಾರ್ಯ ಮುಂದುವರಿಸಿದ.
ಪ್ರಮುಖ ಆರೋಪಿಗಳಿಗೆ ಸಂಬಂಧಿಸಿದ ಸ್ಥಳಗಳಲ್ಲಿ ದಾಳಿ ಮಾಡಿ ಪರಿಶೀಲನೆ ನಡೆಸಿದ.
ಬಿಟ್ ಕಾಯಿನ್, ಕಿಪ್ರೋ ಕರೆನ್ಸಿ ಹಗರಣ ಸಂಬಂಧ ಹಲವೆಡೆ ಎಫ್‌ಐಆರ್ ದಾಖಲಾಗಿತ್ತು. ದೇಶದ ಹಲವು ರಾಜ್ಯಗಳಲ್ಲಿ ಎಫ್‌ಐಆರ್ ದಾಖಲಾಗಿತ್ತು. ಬಳಿಕ ಸುಪ್ರೀಂಕೋರ್ಟ್ ಈ ಪ್ರಕರಣವನ್ನು ಸಿಬಿಐ
ತನಿಖೆಗೆ ವಹಿಸಿತ್ತು. ದೊಡ್ಡ ಮಟ್ಟದ ವಂಚನೆ ಹಾಗೂ ಮನಿ ಲಾಂಡರಿಂಗ್ ಹಿನ್ನೆಲೆಯಲ್ಲಿ ಹಗರಣ ಸಂಬಂಧ ಸಿಬಿಐ ತನಿಖೆ ಕೈಗೊಂಡಿತ್ತು. ಈ ಸಂಬಂಧ ಮಂಗಳವಾರ ಬೆಂಗಳೂರು ಸೇರಿ 60 ಕಡೆಗಳಲ್ಲಿ ದಾಳಿ ನಡೆಸಿದ.
ಗೇನ್ ಬಿಟ್ ಕಾಯಿನ್ ಕಿಪ್ರೊ ಕರೆನ್ನಿ ಹಗರಣಕ್ಕೆ ಸಂಬಂಧಿಸಿ ಬೆಂಗಳೂರು, ಪುಣೆ, ಚಂಡೀಗಡ, ದೆಹಲಿ ಎನ್‌ಸಿಆರ್, ನಾಂದೇಡ್, ಕೊಲ್ಲಾಪುರ ಸೇರಿದಂತೆ ಹಲವೆಡೆ ಸಿಬಿಐ ದಾಳಿ ನಡೆಸಿ ಶೋಧಕಾರ್ಯ ಮುಂದುವರಿಸಿದೆ. ಪ್ರಮುಖ ಆರೋಪಿಗಳಿಗೆ ಸಂಬಂಧಿಸಿದ ಸ್ಥಳಗಳಲ್ಲಿ ದಾಳಿ ಮಾಡಿ ಪರಿಶೀಲನೆ ನಡೆಸಿದ ಎಂದು ಸಿಬಿಐ ವಕ್ತಾರರು ತಿಳಿಸಿದ್ದಾರೆ.ಈ ಸಂದರ್ಭದಲ್ಲಿ ಕಿಪ್ರೊ ವ್ಯಾಲೆಟ್ಸ್, ಡಿಜಿಟಲ್
ಸಾಕ್ಷ್ಯಗಳನ್ನು ಜಪ್ತಿ ಮಾಡಲಾಗಿದೆ. ಜತೆಗೆ ಇಮೇಲ್, ಕೌಡ್‌ಗಳಲ್ಲಿ ಇರುವ ಮಾಹಿತಿಗಳನ್ನು ಸಿಬಿಐ ಪಡೆದುಕೊಂಡಿದೆ.
ಬಿಟ್ ಕಾಯಿನ್ ಹಗರಣ : ಬೆಂಗಳೂರು ಸೇರಿ 60 ಕಡೆ ಸಿಬಿಐ ದಾಳಿ




