ರಾಯಚೂರು : ಮಂಗಳೂರಿನಲ್ಲಿ ಹಿಂದೂ ಮುಖಂಡ ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಖಂಡಿಸಿ ಕೊಲೆ ಪ್ರಕರಣ ವಿರೋಧಿಸಿ ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆ ರಾಯಚೂರು ನಗರದ ಅಂಬೇಡ್ಕರ್ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತುಪ್ರತಿ ಭಟನೆಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ವೀರನಗೌಡ ಲೆಕ್ಕಾಹಾಳ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.
ಇದೆ ಪ್ರತಿಭಟನೆ ವೇಳೆ ಸಿಎಂ ಸಿದ್ದರಾಮಯ್ಯ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದರು ಹಿಂದೂ ಕಾರ್ಯಕರ್ತರ ಕೊಲೆಗೆ ಸರ್ಕಾರ ಪರೋಕ್ಷವಾಗಿ ಸಹಕಾರ ನೀಡುತ್ತಿದೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸರ್ಕಾರದ ನಿಯಂತ್ರಣ ತಪ್ಪಿದೆ ಎಂದು ಘೋಷಣೆ ಕೂಗಿ ಆಕ್ರೋಶ ಹೊರಹಾಕಿದರು.
ಈ ಪ್ರತಿಭಟನ ಸಂದರ್ಭದಲ್ಲಿ ಹತ್ತಾರು ಕಾರ್ಯಕರ್ತರು ಭಾಗಿಯಾಗಿದ್ದರು.
ವರದಿ : ಗಾರಲ ದಿನ್ನಿ ವೀರನ ಗೌಡ




