Ad imageAd image

ಶಕ್ತ ಪ್ರದರ್ಶನದ ಮೂಲಕ ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್

Bharath Vaibhav
ಶಕ್ತ ಪ್ರದರ್ಶನದ ಮೂಲಕ ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್
WhatsApp Group Join Now
Telegram Group Join Now

ಬೆಳಗಾವಿ: -ಬೆಳಗಾವಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಜಗದೀಶ್ ಶೆಟ್ಟರ್ ಅವರು, ಬೃಹತ್ ಮೆರವಣಿಗೆ ಮ‌ೂಲಕ ಬೆಳಗಾವಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ತಮ್ಮ ಉಮೇದುವಾರಿಕೆ ಸಲ್ಲಿಸಿದ್ದಾರೆ. ನಾಮಪತ್ರ ಸಲ್ಲಿಸುವ ಮುಂಚೆ ಬೃಹತ್ ಮೆರವಣಿಗೆ ಮೂಲಕ ಶಕ್ತಿ ಪ್ರದರ್ಶನ ಮಾಡಿದ್ದಾರೆ.‌

ಬುಧವಾರ ಬೆಳಗಾವಿಯ ಸಮಾದೇವಿ ದೇವಾಲಯದಲ್ಲಿ ಪೂಜೆ ಸಲ್ಲಿಸಿದರು. ಸಮಾದೇವಿಗಲ್ಲಿಯಿಂದ ಆರಂಭವಾದ ಮೆರವಣಿಗೆಯ ಖಡೆಬಜಾರ ರೋಡ್, ಗಣಪತಿ ಗಲ್ಲಿ, ಕಾಕತಿವೇಸ್, ಶನಿವಾರ ಕೂಟ್, ಚನ್ನಮ್ಮ ವೃತ್ತ ಹಾಗೂ ಜಿಲ್ಲಾಧಿಕಾರಿ ಕಚೇರಿ ವರೆಗೆ ಸಾಗಿತು.‌ ಬೆಳಗಾವಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಜಗದೀಶ್ ಶೆಟ್ಟರ್ ಮೆರವಣಿಗೆ ವಾಹನ ಏರಿದಾಗ ಅಭಿಮಾನಿಗಳು ಜಯ ಘೊಷಣೆ ಹಾಕಿದರು. ವಿವಿಧ ಭಾಗದಿಂದ ಬಂದಿದ ಕಾರ್ಯಕರ್ತರು ಮೋದಿ ಮೋದಿ ಎಂವ ಘೋಷಣೆಯೊಂದಿಗೆ ಉತ್ಸಾಹದಿಂದ ಮೆರವಣಿಗೆಯಲ್ಲಿ ಸಾಗಿದರು.

ಮೆರವಣಿಗೆಯಲ್ಲಿ ಗಮನ ಸೇಳೆದ ವಿವಿಧ ವಾದ್ಯಗಳು

ಜಗದೀಶ್ ಶೆಟ್ಟರ್ ಅವರು ನಾಮಪತ್ರಸಲ್ಲಿಸುವ ಮುಂಚೆ ಢೋಲ್ ತಾಶ್, ಡೊಳ್ಳು ಕುಣಿತ ವಾದ್ಯಗಳು ಎಲ್ಲರ ಗಮನ ಸೇಳೆದರು.‌ ವಿವಿಧ ಭಾಗದಿಂದ ಬಂದಿದ ಜನರು ವಾದ್ಯಗಳೊಂದಿಗೆ ಕುಣಿದು ಕುಪ್ಪಳಿಸಿದರು.‌ ಕೇಸರಿ ಪೇಟ್ ಧರಿಸಿದ ಸಾವಿರಾರು ಮಹಿಳೆಯರು ಮೆರವಣಿಗೆಯಲ್ಲಿ ಗಮನ ಸೇಳೆದರು.‌

ನಾಮಪತ್ರ ಸಲ್ಲಿಕೆಗೆ ನಾಯಕರ ಸಾಥ್

ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ, ಗೋವಾ ಸಿಎಂ ಪ್ರಮೋದ ಸಾವಂತ್, ಸಂಸದೆ ಮಂಗಳಾ ಅಂಗಡಿ, ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ಶಾಸಕರಾದ ಅಭಯ ಪಾಟೀಲ್, ಬಾಲಚಂದ್ರ ಜಾರಕಿಹೊಳಿ, ದುರ್ಯೋಧನನ ಐಹೊಳೆ, ವಿಧಾನ ಪರಿಷತ್ ಸದಸ್ಯ ಹನಂಮತ್ ನೀರಾಣಿ. ಮಾಜಿ ಶಾಸಕರಾದ ಅನೀಲ ಬೆನಕೆ, ಮಾಜಿ ಸಚಿವ ಮುರಗೇಶ್ ನಿರಾಣಿ, ಮಾಜಿ ರಾಜ್ಯಸಭಾ ಸದಸ್ಯ ಪ್ರಭಾಕರ ಕೋರೆ ಸೇರಿದಂತೆ ಲಕ್ಷಾಂತರ ಕಾರ್ಯಕರ್ತರು ಉಪಸ್ಥಿತರಿದ್ದರು.‌ವರದಿ ಪ್ರತೀಕ ಚಿಟಗಿ

WhatsApp Group Join Now
Telegram Group Join Now
- Advertisement -  - Advertisement -  - Advertisement - 
Share This Article
error: Content is protected !!