ಬೆಂಗಳೂರು : ಪ್ರಧಾನಿ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ವಿರುದ್ಧ ಸೋಶಿಯಲ್ ಮೀಡಿಯಾದಲ್ಲಿ ಆಕ್ಷೇಪಾರ್ಹ ಪೋಸ್ಟ್ ಮಾಡಿರುವ ವಿಚಾರ ಸಂಬಂಧ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಲಾಗಿದೆ.
ವಿಧಾನ ಪರಿಷತ್ ಬಿಜೆಪಿ ಸದಸ್ಯ ಛಲವಾದಿ ನಾರಾಯಣಸ್ವಾಮಿ ನೇತೃತ್ವದಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಲಾಗಿದೆ.
ಪ್ರಧಾನಿ ಮೋದಿ ಬಗ್ಗೆ ಟ್ವೀಟ್ ಮಾಡಲಾಗಿದೆ ಎಂದು ಆರೋಪಿಸಿ ಸಚಿವ ಪ್ರಿಯಾಂಕ್ ಖರ್ಗೆ ಮನೆಗೆ ಬಿಜೆಪಿ ಕಾರ್ಯಕರ್ತರು ಮುತ್ತಿಗೆ ಹಾಕಲು ಯತ್ನಿಸಿದ ಘಟನೆ ಇಂದು ನಡೆದಿತ್ತು.
ಐಟಿ/ಇಡಿ ದಾಳಿಗಳು ಮತ್ತು ವಿರೋಧ ಪಕ್ಷದ ನಾಯಕರ ಬಂಧನಗಳು ನೈಜ ಸಮಸ್ಯೆಗಳಿಂದ ಸಾರ್ವಜನಿಕರನ್ನು ಬೇರೆ ಕಡೆಗೆ ಸೆಳೆಯಲು ಬಿಜೆಪಿ ಮಾಡುತ್ತಿರುವ ಕಾರ್ಯಾಚರಣೆಯ ಭಾಗವಾಗಿದೆ.
ಚೋರ್ ಗುರು ಮತ್ತು ಚಂಡಾಲ್ ಶಿಷ್ಯರಿಂದ ಆದೇಶಕ್ಕಾಗಿ ಕಾಯುತ್ತಿರುವ ಜಾರಿ ಸಂಸ್ಥೆಗಳು ಇಷ್ಟು ದಿನ ಏನು ಮಾಡುತ್ತಿದ್ದವು? ಎಂದು ಪ್ರಶ್ನೆ ಮಾಡಿದ್ದರು. ಪ್ರಧಾನಿ ಮೋದಿ ಹಾಗೂ ಅಮಿತ್ ಶಾ ರನ್ನು ಚೋರ್ ಗುರು ಮತ್ತು ಚಂಡಾಲ್ ಶಿಷ್ಯ ಎಂದು ಕರೆದಿದ್ದರು.