ಬೆಂಗಳೂರು: ಹನಿಟ್ರಾಪ್ ಕುರಿತಂತೆ ಹೈಕೋರ್ಟಿನ ಈಗಿನ ನ್ಯಾಯಮೂರ್ತಿಗಳು ಅಥವಾ ಸಿಬಿಐ ತನಿಖೆ ನಡೆಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಅವರು ಆಗ್ರಹಿಸಿದ್ದಾರೆ. ಮಾಧ್ಯಮ ಪ್ರತಿನಿಧಿಗಳ ಜೊತೆ ಇಂದು ಮಾತನಾಡಿದ ಅವರು, ಸಚಿವರಾದ ರಾಜಣ್ಣ ಅವರು ರಾಜ್ಯ ಹಾಗೂ ದೇಶದ 48ಕ್ಕೂ ಹೆಚ್ಚು ಪ್ರಮುಖರು ಹನಿಟ್ರ್ಯಾಪ್‌ಗೆ ಒಳಗಾದ ಕುರಿತು ತಿಳಿಸಿ ತನಿಖೆ ಆಗಬೇಕೆಂದು ಹೇಳಿಕೆ ಕೊಟ್ಟಿದ್ದಾರೆ.
ಇದು ಬಹಳ ಗಂಭೀರ ವಿಚಾರ ಎಂದು ತಿಳಿಸಿದ ಗೃಹ ಸಚಿವರು, ಇದರ ಬಗ್ಗೆ ತನಿಖೆ ಮಾಡಿಸುವುದಾಗಿ ಹೇಳಿದ್ದರು. ಸದನ ಮುಗಿದ ಬಳಿಕ ಹೊರಕ್ಕೆ ಬಂದ ಗೃಹ ಸಚಿವರು, ತಮಗೆ ಅಧಿಕೃತವಾಗಿ ಯಾವುದೇ ಅಧಿಕಾರಿಗಳು ಮಾಹಿತಿ ನೀಡಿಲ್ಲ ಎಂದಿದ್ದಾರೆ ಎಂದು ವಿವರಿಸಿದರು. ಅಧಿಕಾರಿಗಳು ಮಾಹಿತಿ ಕೊಟ್ಟ ಮೇಲೆ ಅದರ ಕುರಿತು
ಆಲೋಚಿಸುವುದಾಗಿ ತಿಳಿಸಿ ದ್ವಂದ್ವ ನೀತಿ ಪ್ರದರ್ಶನ ಮಾಡಿದ್ದಾರೆ. ನಾವು ಸದನದಲ್ಲಿ ಮುಖ್ಯಮಂತ್ರಿಗಳಿಂದ ಉತ್ತರ ಪಡೆಯುವ ಪ್ರಯತ್ನ ಮಾಡಿದ್ದೇವ. ಅವರು ಯಾವುದೇ ರೀತಿ ಸರಿಯಾದ ಉತ್ತರ ಕೊಟ್ಟಿಲ್ಲ ಎಂದು ಟೀಕಿಸಿದರು.
ಇದೊಂದು ಗಂಭೀರ ಪ್ರಕರಣ. ಇದು ಸದನದ 224 ಶಾಸಕರ, ರಾಜ್ಯದ ಗೌರವದ ಪ್ರಶ್ನೆ. ಬಿಜೆಪಿ ಹಾಗೂ ಜೆಡಿಎಸ್ ಒಟ್ಟಾಗಿ ಪ್ರತಿಭಟಿಸುವುದಾಗಿ ತಿಳಿಸಿದರು.