ಶಿಗ್ಗಾವಿ:- ಈಗ ತಾನೇ ಲೋಕಸಭಾ ಸಮರ ಮುಗಿದಿದ್ದು, ರಾಜ್ಯದಲ್ಲಿ ಉಪ ಚುನಾವಣೆಗಳ ಕಾವು ರಂಗೇರುತ್ತಿದೆ. ಮಾಜಿ ಮುಖ್ಯ ಮಂತ್ರಿ ಬಸವರಾಜು ಬೊಮ್ಮಾಯಿ ಲೋಕಸಭಾ ಸದಸ್ಯರಾದ ಹಿನ್ನೆಲೆ ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡಿರುವ ಹಿನ್ನೆಲೆಯಲ್ಲಿ ಶಿಗ್ಗಾವಿ ಕ್ಷೇತ್ರದಲ್ಲಿ ಉಪ ಚುನಾವಣೆ ಕಾವು ದಿನೇ ದಿನೇ ಜೋರಾಗುತ್ತಿದೆ.
ಇನ್ನೂ ಬಿಜೆಪಿ ಹಾಗೂ ಕಾಂಗ್ರೆಸ್ ನಡುವೆ ನೇರ ಸ್ಪರ್ಧೆಯಾಗುವ ಸಾಧ್ಯತೆಗಳು ಹೆಚ್ಚಾಗಿದ್ದು, ಇದರ ಮುಂದುವರಿದ ಭಾಗವಾಗಿ ಶಿಗ್ಗಾವಿ ಕ್ಷೇತ್ರದಲ್ಲಿ ಸಮಾಜಸೇವೆಯ ಮೂಲಕ ಅತ್ಯಂತ ಜನಪ್ರಿಯ ವ್ಯಕ್ತಿಯಾಗಿರುವ ಬಿಜೆಪಿ ಪಕ್ಷದ ಮುಖಂಡರು ಆಗಿರುವ ಶಶಿಧರ್ ಯಲಿಗಾರ ಅವರೊಂದಿಗೆ ಶಿಗ್ಗಾವಿ ಕ್ಷೇತ್ರದಲ್ಲಿ ಬಿಜೆಪಿ ಪಕ್ಷದಿಂದ ಟಿಕೆಟ್ ಗಾಗಿ ಪ್ರಯತ್ನ ಹಾಗೂ ಸಂಘಟನೆ ಹಾಗೂ ಇನ್ನಿತರ ವಿಷಯಗಳ ಬಗ್ಗೆ ನಮ್ಮ ನ್ಯೂಸ್ ಸಮೂಹದ ರಾಜ್ಯ ಉಪ ಸಂಪಾದಕ ಬಸವರಾಜು ಮುಕ್ತವಾಗಿ ಸಂದರ್ಶನ ಮಾಡಿದ್ದಾರೆ.
ವರದಿ:- ಬಸವರಾಜು