Ad imageAd image

ರಾತ್ರಿಯಿಡಿ ಭಜನೆ ಜಾಗರಣೆ ಮಾಡಿ, ಬೆಳಿಗ್ಗೆ ವಿಧಾನಸೌಧದ ಆವರಣದಲ್ಲಿ ಬಿಜೆಪಿ ನಾಯಕರು ವಾಕಿಂಗ್

Bharath Vaibhav
ರಾತ್ರಿಯಿಡಿ ಭಜನೆ ಜಾಗರಣೆ ಮಾಡಿ, ಬೆಳಿಗ್ಗೆ ವಿಧಾನಸೌಧದ ಆವರಣದಲ್ಲಿ ಬಿಜೆಪಿ ನಾಯಕರು ವಾಕಿಂಗ್
WhatsApp Group Join Now
Telegram Group Join Now

ಬೆಂಗಳೂರು : ವಿಧಾನಸಭೆ ಹಾಗೂ ವಿಧಾನಪರಿಷತ್​ನಲ್ಲಿ ಕಳೆದ ಒಂದು ವಾರದಿಂದ ಹಗರಣಗಳದ್ದೇ ಸದ್ದು. ಮುಡಾ ಸೈಟು ಹಂಚಿಕೆ, ವಾಲ್ಮೀಕಿ ನಿಗಮದಲ್ಲಾಗಿರುವ ಬಹುಕೋಟಿ ಹಗರಣದ ವಿರುದ್ಧ ಬಿಜೆಪಿ ಜೆಡಿಎಸ್ ಮೈತ್ರಿ ಪಕ್ಷಗಳ ಹೋರಾಟ ತೀವ್ರಗೊಂಡಿದೆ.

ಇಷ್ಟು ದಿನ ಸದನದ ಬಾವಿಗಿಳಿದು ಹೋರಾಟ ಮಾಡುತ್ತಿದ್ದ ಬಿಜೆಪಿ, ಜೆಡಿಎಸ್ ಸದಸ್ಯರು ಬುಧವಾರದಿಂದ ಅಹೋರಾತ್ರಿ ಧರಣಿ ಕೈಗೊಂಡಿದ್ದಾರೆ.ಧರಣಿ ಮುಂದುವರಿಸಿದ ಬಿಜೆಪಿ, ಜೆಡಿಎಸ್ ಸದಸ್ಯರು ಭಜನೆ, ಹಾಡಿನ ಮೂಲಕ ಕಾಂಗ್ರೆಸ್ ಸರ್ಕಾರದ ವಿರುದ್ಧ ವಿಭಿನ್ನ ಪ್ರತಿಭಟನೆ ನಡೆಸಿದರು.

ಕಂಜಿರಾ, ತಾಳ ಬಡಿಯುತ್ತಾ ಭಜನೆ ಜೊತೆಗೆ ಸಿನಿಮಾದ ಹಾಡುಗಳನ್ನೂ ಹಾಡಿದ್ದಾರೆ. ಬಿವೈ ವಿಜಯೇಂದ್ರ, ಪರಿಷತ್ ಸದಸ್ಯ ರವಿಕುಮಾರ್ ಸೇರಿದಂತೆ ಬಿಜೆಪಿ ಸದಸ್ಯರು ವಿಧಾನಸೌಧದ ಕಾರಿಡಾರ್​ನಲ್ಲಿ ಭಜನೆ ಮಾಡುತ್ತಾ ಹೆಜ್ಜೆ ಹಾಕಿದರು.

ಇನ್ನು ಹಗರಣಗಳ ಕುರಿದಂತೆ ಇಂದು ಬೆಳಿಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಚಿವ ಡಾ. ಅಶ್ವತ್ಥನಾರಾಯಣ್ ವಾಲ್ಮೀಕಿಯ ಕರ್ಣದ ಬಗ್ಗೆ ಚರ್ಚೆಗೆ ಅವಕಾಶ ನೀಡಬೇಕು ಚರ್ಚೆಗೆ ಅವಕಾಶ ನೀಡುವವರಿಗು ಧರಣಿ ಮಾಡುತ್ತೇವೆ ವಿಧಾನಸಭದಲ್ಲಿ ಶಾಸಕ ಅಶ್ವಥ್ ನಾರಾಯಣ ಆಗ್ರಹಿಸಿದರು.

ಹಗರಣಗಳ ಬಗ್ಗೆ ಸವಿಸ್ತಾರವಾಗಿ ಜನರಿಗೆ ತಿಳಿಸಬೇಕು ಸದನದಲ್ಲಿ ಸವಿಸ್ತಾರವಾದ ಚರ್ಚೆಗೆ ಅವಕಾಶ ನೀಡಬೇಕು ಭಗರಣದಲ್ಲಿ ಸಿಎಂಸಿ ಸಿದ್ಧರಾಮಯ್ಯ ಹೆಸರು ಕೇಳಿ ಬಂದಿದೆ ಕ್ಷಮಿಸ್ತಾನಕ್ಕೆ ಅದು ವಿಧಾನಸೌಧದಲ್ಲಿ ಶಾಸಕ ಅಶ್ವತ ನಾರಾಯಣ ಆಗ್ರಹಿಸಿದ್ದಾರೆ.

ಇನ್ನು ಇದೇ ವಿಷಯವಾಗಿ ಮಾಜಿ ಗೃಹ ಸಚಿವ ಅರಗ ಜ್ಞಾನೇಂದ್ರ ಅವರು ಪ್ರತಿಕ್ರಿಯೆ ನೀಡಿದ್ದು, ಇಂದು ಕೂಡ ಮುಡಾ ಹಗರಣದ ಚರ್ಚೆಗೆ ಮನವಿ ಮಾಡುತ್ತೇವೆ. ಸರ್ಕಾರ ಚರ್ಚೆಗೆ ಅವಕಾಶ ನೀಡದಿದ್ದರೆ ಧರಣಿ ಮುಂದುವರಿಸುತ್ತೇವೆ. ಅಧಿವೇಶನ ಮದುವೆಯವರೆಗೂ ಧರಣಿ ಮುಂದುವರಿಸುತ್ತೇವೆ ಎಂದು ಮಾರಿ ಸಚಿವ ಅರಗ ಜ್ಞಾನೇಂದ್ರ ಹೇಳಿಕೆ ನೀಡಿದರು.

ಇನ್ನೂ ರಾತ್ರಿಯಿಡಿ ಭಜನೆ ಜಾಗರಣೆ ಮಾಡಿದ ನಂತರ ಇಂದು ಬೆಳಿಗ್ಗೆ ವಿಧಾನಸೌಧದ ಆವರಣದಲ್ಲಿ ಮುಂಜಾನೆ ಬಿಜೆಪಿ ನಾಯಕರು ವಾಕಿಂಗ್ ನಡೆಸಿದರು. ವಿಪಕ್ಷ ನಾಯಕ ಅಶೋಕ್, ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ, ಬಿಜೆಪಿ ಶಾಸಕರಾದ ಪ್ರಭು ಚೌಹಾಣ್, ಭರತ್ ಶೆಟ್ಟಿ, ಶ್ರೀಶೈಲ, ಎಂ ಎಲ್ ಸಿ ಪ್ರತಾಪ್ ಸಿಂಹ ಸೇರಿದಂತೆ ಬಿಜೆಪಿ ಜೆಡಿಎಸ್ ನಾಯಕರು ಯೋಗ ವ್ಯಾಯಾಮಗಳಲ್ಲಿ ತೊಡಗಿಕೊಂಡರು.

 

 

WhatsApp Group Join Now
Telegram Group Join Now
- Advertisement -  - Advertisement -  - Advertisement - 
Share This Article
error: Content is protected !!