Ad imageAd image

ನಡುರಸ್ತೆಯಲ್ಲೇ ಬಿಜೆಪಿ ನಾಯಕನ ಕಾಮ ಕ್ರೀಡೆ : ವಿಡಿಯೋ ವೈರಲ್ 

Bharath Vaibhav
ನಡುರಸ್ತೆಯಲ್ಲೇ ಬಿಜೆಪಿ ನಾಯಕನ ಕಾಮ ಕ್ರೀಡೆ : ವಿಡಿಯೋ ವೈರಲ್ 
WhatsApp Group Join Now
Telegram Group Join Now

ಭೋಪಾಲ್: ಮಧ್ಯಪ್ರದೇಶದ ಮಂಡೌರ್ ಜಿಲ್ಲೆಯ ಬಿಜೆಪಿ ನಾಯಕ ಮನೋಹರ್ ಲಾಲ್ ಧಾಕರ್ ಅವರು ಮಹಿಳೆಯೊಂದಿಗೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಆಕ್ಷೇಪಾರ್ಹ ಕೃತ್ಯದಲ್ಲಿ ತೊಡಗಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಈ ಘಟನೆ ಮೇ 13ರಂದು ನಡೆದಿದ್ದು, ಸ್ಥಳೀಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಸುಮಾರು ಮೂರೂವರೆ ನಿಮಿಷಗಳ ಈ ವಿಡಿಯೋ ಸಾರ್ವಜನಿಕರಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.

ಮಂಡೌರ್ ಜಿಲ್ಲೆಯ ಬನಿ ಗ್ರಾಮದ ನಿವಾಸಿಯಾಗಿರುವ ಮನೋಹರ್ ಲಾಲ್ ಧಾಕರ್, ಜಿಲ್ಲಾ ಪಂಚಾಯತ್ ಸದಸ್ಯರಾಗಿದ್ದು, ಬಿಜೆಪಿಯ ಸಕ್ರಿಯ ಸದಸ್ಯ ಎಂದು ಪರಿಗಣಿಸಲಾಗಿದೆ.

ಆ ವಿಡಿಯೋದಲ್ಲಿ ಧಾಕರ್ ರಾಷ್ಟ್ರೀಯ ಹೆದ್ದಾರಿಯ ರಸ್ತೆ ಬದಿಯಲ್ಲಿ ಕಾರಿನಿಂದ ಇಳಿದು ಮಹಿಳೆಯೊಂದಿಗೆ ಅನುಚಿತ ವರ್ತನೆಯಲ್ಲಿ ತೊಡಗಿರುವುದು ಸ್ಪಷ್ಟವಾಗಿ ಕಂಡುಬಂದಿದೆ. ಈ ಘಟನೆ ಸಾರ್ವಜನಿಕ ಸ್ಥಳದಲ್ಲಿ ನಡೆದಿರುವುದರಿಂದ ಜನರಲ್ಲಿ ತೀವ್ರ ಅಸಮಾಧಾನ ಮೂಡಿದೆ.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!