Ad imageAd image

ಬಹುಮತದತ್ತ ಬಿಜೆಪಿ;33 ಕ್ಷೇತ್ರಗಳಲ್ಲಿ ಮುನ್ನಡೆ

Bharath Vaibhav
ಬಹುಮತದತ್ತ ಬಿಜೆಪಿ;33 ಕ್ಷೇತ್ರಗಳಲ್ಲಿ ಮುನ್ನಡೆ
WhatsApp Group Join Now
Telegram Group Join Now

ಅರುಣಾಚಲ ಪ್ರದೇಶದ ವಿಧಾನಸಭೆ ಚುನಾವಣೆಯ ಮತ ಎಣಿಕೆ ನಡೆಯುತ್ತಿದ್ದು, ಬೆಳಿಗ್ಗೆ 10ರ ವರೆಗೆ ಚುನಾವಣಾ ಆಯೋಗದ ಮಾಹಿತಿ ಪ್ರಕಾರ ಆಡಳಿತಾರೂಢ ಬಿಜೆಪಿ 33 ಕ್ಷೇತ್ರಗಳಲ್ಲಿ, ನ್ಯಾಶನಲ್ ಪೀಪಲ್ಸ್ ಪಾರ್ಟಿ(ಎನ್‌ಪಿಇಪಿ) 6 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಬೆಳಿಗ್ಗೆ 6 ಗಂಟೆಯಿಂದ 50 ಕ್ಷೇತ್ರಗಳ ಮತ ಎಣಿಕೆ ನಡೆಯುತ್ತಿದೆ. 60 ಕ್ಷೇತ್ರಗಳ ಪೈಕಿ 10 ಕ್ಷೇತ್ರಗಳಲ್ಲಿ ಬಿಜೆಪಿ ಅವಿರೋಧವಾಗಿ ಆಯ್ಕೆಯಾಗಿದೆ.

ಲೋಕಸಭಾ ಮತ್ತು ವಿಧಾನಸಭಾ ಚುನಾವಣೆಯ ಮತದಾನ ಏಪ್ರಿಲ್‌ 19 ರಂದು ಏಕಕಾಲದಲ್ಲಿ ನಡೆದಿತ್ತು.ಉಳಿದಂತೆ ಕಾಂಗ್ರೆಸ್ 4 ಕ್ಷೇತ್ರಗಳಲ್ಲಿ ಮತ್ತು ಪೀ‍ಪಲ್ಸ್ ಪಾರ್ಟಿ ಆಫ್ ಅರುಣಾಚಲ(ಪಿಪಿಎ) 3 ಕ್ಷೇತ್ರಗಳಲ್ಲಿ ಮುನ್ನಡೆ ಪಡೆದಿತ್ತು.ರಾಜ್ಯದಾದ್ಯಂತ ಮಳೆ ಸುರಿಯುತ್ತಿದ್ದರೂ ಮತ ಎಣಿಕೆ ಕೇಂದ್ರಗಳ ಎದುರು ಕಾರ್ಯಕರ್ತರ ದಂಡೇ ನೆರೆದಿದೆ.

WhatsApp Group Join Now
Telegram Group Join Now
- Advertisement -  - Advertisement -  - Advertisement - 
Share This Article
error: Content is protected !!