Ad imageAd image

ಜುಲೈ ಮೊದಲ ವಾರದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರ ಘೋಷಣೆ 

Bharath Vaibhav
ಜುಲೈ ಮೊದಲ ವಾರದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರ ಘೋಷಣೆ 
WhatsApp Group Join Now
Telegram Group Join Now

ಬೆಂಗಳೂರು : ಸದ್ಯ ರಾಜ್ಯ ರಾಜಕಾರಣದಲ್ಲಿ ಕಾಂಗ್ರೆಸ್ ಸರ್ಕಾರ ಹಗರಣಗಳ ಸರಮಾಲೆ ಸುತ್ತಿಕೊಂಡಿದ್ದು, ಇನ್ನೊಂದು ಕಡೆ ರಾಜ್ಯ ಬಿಜೆಪಿಯಲ್ಲಿ ಹಲವು ಬೆಳವಣಿಗೆ ಆಗಿವೆ. ಇತ್ತೀಚಿಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಹಾಗೂ ವಿಪಕ್ಷ ನಾಯಕ ಆರ್ ಅಶೋಕ್ ಒಂದೇ ದಿನ ದೆಹಲಿಗೆ ಭೇಟಿ ನೀಡಿದ್ದರು.

ಅಲ್ಲದೆ ಮುಂದಿನ ಜುಲೈ ಮೊದಲನೇ ವಾರದಲ್ಲಿ ರಾಜ್ಯಕ್ಕೆ ಬಿಜೆಪಿಯ ನೂತನ ಅಧ್ಯಕ್ಷ ಘೋಷಣೆ ಆಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

ರಾಜ್ಯ ಬಿಜೆಪಿ ಘಟಕಕ್ಕೆ ಅಧ್ಯಕ್ಷರ ನೇಮಕ ವಿಚಾರವಾಗಿ ವಿ.ಸೋಮಣ್ಣಗೆ ರಾಜ್ಯಾಧ್ಯಕ್ಷ ಸ್ಥಾನಪಟ ಕಟ್ಟಲು ಪ್ರಯತ್ನ ನಡೆದಿತ್ತು ಎನ್ನಲಾಗುತ್ತಿದೆ.

ವಿ. ಸೋಮಣ್ಣ ಮನವೊಲಿಸಲು ಒಂದು ಬಣ ಪ್ರಯತ್ನ ಮಾಡಿತ್ತು. ಎರಡು ಜವಾಬ್ದಾರಿ ನಿರ್ವಹಿಸಲು ಸಚಿವ ವಿ.ಸೋಮಣ್ಣ ಮನಸ್ಸು ಮಾಡಿದ್ದರು. ಸಚಿವ ಸ್ಥಾನದ ಜೊತೆಗೆ ರಾಜ್ಯಾಧ್ಯಕ್ಷ ಜವಾಬ್ದಾರಿವ ಹೆಸರು ವಿ.ಸೋಮಣ್ಣ ಮನಸ್ಸು ಮಾಡಿದ್ದರು.

ಆದರೆ ಕೇಂದ್ರ ಸಚಿವ ಸ್ಥಾನದಲ್ಲಿ ಮುಂದುವರಿಯುವಂತೆ ಸೂಚನೆ ನೀಡಲಾಗಿದ್ದು ವರಿಷ್ಠರು ಕೇಂದ್ರ ಸಚಿವ ವಿ.ಸೋಮಣ್ಣಗೆ ಈ ಕುರಿತು ಸೂಚನೆ ನೀಡಿದ್ದಾರೆ ಎಂದು ತಿಳಿದುಬಂದಿದೆ.

ಅಲ್ಲದೇ ಮುಂದಿನ 2 ವಾರದೊಳಗೆ ಕರ್ನಾಟಕ ಸೇರಿದಂತೆ 6ರಿಂದ 8 ರಾಜ್ಯಗಳಿಗೆ ಅಧ್ಯಕ್ಷರ ಘೋಷಣೆ ಮಾಡುವ ಸಾಧ್ಯತೆ ಇದೆ. ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿವೈ ವಿಜಯೇಂದ್ರ ಮುಂದುವರೆದರೆ, ಇನ್ನುಳಿದ ಪ್ರಧಾನ ಕಾರ್ಯದರ್ಶಿಗಳು ಸೇರಿ ಪದಾಧಿಕಾರಿಗಳು ಬದಲಾವಣೆ ನಿಶ್ಚಿತ ಎನ್ನಲಾಗಿದೆ.

ಜುಲೈ ಮೊದಲ ವಾರದೊಳಗೆ ಈ ಕುರಿತು ಸ್ಪಷ್ಟ ನಿರುದ್ಧಾರ ಘೋಷಣೆ ಆಗುವ ಸಾಧ್ಯತೆ ಇದೆ ರಾಜ್ಯಾಧ್ಯಕ್ಷ ಸ್ಥಾನದ ಬಗ್ಗೆ ಹೈಕಮಾಂಡ್ ಸ್ಪಷ್ಟ ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆ ಇದೆ ಎನ್ನಲಾಗಿದೆ.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!