ಬೆಂಗಳೂರು : ಆರ್ ಸಿಬಿ ವಿಜಯೋತ್ಸವದ ವೇಳೆ ಉಂಟಾದ ಕಾಲ್ತುಳಿತದಲ್ಲಿ 11 ಜನ ಅಭಿಮಾನಿಗಳು ಸಾವನ್ನಪ್ಪಿದ್ದು, ಅವರ ಸಾವಿಗೆ ಸರ್ಕಾರವೇ ನೇರ ಹೊಣೆ ಎಂದು ಆರೋಪಿಸಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ರಾಜೀನಾಮೆ ನೀಡಬೇಕು ಬಿಜೆಪಿ ಪ್ರತಿಭಟನೆ ನಡೆಸಿದ್ದು, ಇದೀಗ ಸಿಎಂ ಮನೆಗೆ ಮುತ್ತಿಗೆ ಹಾಕಲು ಬಿಜೆಪಿ ನಾಯಕರು ಯತ್ನಿಸಿದ್ದಾರೆ.
ಬೆಂಗಳೂರು ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ಗೃಹ ಸಚಿವ ಜಿ ಪರಮೇಶ್ವರ್ ರಾಜೀನಾಮೆ ನೀಡಬೇಕು ಒತ್ತಾಯಿಸಿ ಇಂದು ಬಿಜೆಪಿ ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ ನಡೆಸಿದ್ದು, ಇದೇ ವೇಳೆ ಸಿಎಂ ಮನೆಗೆ ಮುತ್ತಿಗೆ ಹಾಕಲು ಯತ್ನಿಸಲಾಗಿದೆ.
ವಿಪಕ್ಷ ನಾಯಕ ಆರ್ ಅಶೋಕ್ ಹಾಗೂ ರಾಜ್ಯಾಧ್ಯಕ್ಷ ವಿಜಯೇಂದ್ರ ನೇತೃತ್ವದಲ್ಲಿ ಸಿಎಂ ಸಿದ್ದರಾಮಯ್ಯ ಅವರ ಮನೆಯ ಮೇಲೆ ಮುತ್ತಿಗೆಗೆ ಯತ್ನಿಸಿದ್ದು, ಕೂಡಲೇ ಎಚ್ಚೆತ್ತ ಪೊಲೀಸರು ಪ್ರತಿಭಟನಾಕಾರರನ್ನು ವಶಕ್ಕೆ ಪಡೆದು ಉಪ್ಪಾರಪೇಟೆ ಠಾಣೆಗೆ ಕರೆದೊಯ್ದಿದ್ದಾರೆ.
ಸಿಎಂ ಮನೆಗೆ ಬಿ.ವೈ.ವಿಜಯೇಂದ್ರ, ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್, ಛಲವಾದಿ ನಾರಾಯಣಸ್ವಾಮಿ, ಸಂಸದರಾದ ಗೋವಿಂದ ಕಾರಜೋಳ, ಶಾಸಕರಾದ ಕೆ.ಗೋಪಾಲಯ್ಯ, ಸಿಮೆಂಟ್ ಮಂಜುನಾಥ್, ಭೈರತಿ ಬಸವರಾಜು, ಸಿ.ಕೆ. ರಾಮಮೂರ್ತಿ, ಎಂಎಲ್ ಸಿ ಗಳಾದ ಭಾರತಿ ಶೆಟ್ಟಿ, ರವಿಕುಮಾರ್ ಸೇರಿ ಹಲವರನ್ನು ಮುತ್ತಿಗೆ ಹಾಕಲು ಯತ್ನಿಸಿದ್ದು, ಪೊಲೀಸರು ವಶಕ್ಕೆ ಪಡೆದಿದ್ದಾರೆ.