ಬೆಂಗಳೂರು : ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಯವರ ವಿರುದ್ದ ಅತ್ಯಾಚಾರ ಆರೋಪ ದಾಖಲಾಗಿದ್ದು, ಎಫ್ ಐ ಆರ್ ದಾಖಲಾಗಿದ್ದರೂ ಈವರೆಗೆ ಬಂಧಿಸದಿರುವುದಕ್ಕೆ ರಾಜ್ಯ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ.
ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಬಿಜೆಪಿ ಪೋಸ್ಟ ಮಾಡಿದ್ದು, ಕೊಲೆಗಡುಕ, ಅತ್ಯಾಚಾರಿ ವಿನಯ್ ಕುಲಕರ್ಣಿಯ ಕಾಮಕಾಂಡ ಬಟಾಬಯಲಾಗಿದ್ದು, ಎಫ್ಐಆರ್ ದಾಖಲಾಗಿದೆ.
ಕೂಡಲೇ ಅತ್ಯಾಚಾರಿ, ಕಾಮುಕ ವಿನಯ್ ಕುಲಕರ್ಣಿಯನ್ನು ಬಂಧಿಸಿ, ಅತ್ಯಾಚಾರಕ್ಕೊಳಗಾದ ಮಹಿಳೆಗೆ ನ್ಯಾಯ ದೊರಕಿಸಬೇಕೆಂದು ಆಗ್ರಹಿಸುತ್ತೇವೆ ಎಂದು ಹೇಳಿದೆ.