ಹುಬ್ಬಳ್ಳಿ : ಮತ ಬ್ಯಾಂಕ್ ರಾಜಕೀಯ ಮಾಡುವ ಕೆಲಸವನ್ನು ಕಾಂಗ್ರೆಸ್‌ನವರು ಮಾಡುತ್ತಿದ್ದಾರೆ.ಅವಳಿ ನಗರ ಬಂದ್ ಮಾಡುವ ಮೂಲಕ ಜನಸಾಮಾನ್ಯರಿಗೆ ಕಾಂಗ್ರೆಸ್ ಸಮಸ್ಯೆ ತಂದೊಡ್ಡುತ್ತಿದೆ ಎಂದು ರಾಜ್ಯ ವಿಧಾನಸಭೆ ವಿರೋಧ ಪಕ್ಷದ ಉಪನಾಯಕ ಅರವಿಂದ ಬೆಲ್ಲದ ಹೇಳಿದರು.
ಇಂದು ಸುದ್ದಿಗಾರರೊಡನೆ ಮಾತನಾಡಿದ ಅವರು, ಸಂವಿಧಾನ ಹಾಗೂ ಸಂವಿಧಾನಶಿಲ್ಪಿಗೆ ಅತೀಹೆಚ್ಚು ಅವಮಾನ ಮಾಡಿದವರು ಕಾಂಗ್ರೆಸ್‌ನವರು. ಆದರೂ ಮುಗ್ಧ ದಲಿತರನ್ನು ದುರುಪಯೋಗಪಡಿಸಿಕೊಂಡು ಅವಳಿನಗರದಲ್ಲಿ ದಿ.೯ರಂದು ಬಂದ್‌ಗೆ ಕರೆ ನೀಡಲಾಗಿದೆ ಎಂದರು.
ಬೆಲೆ ಏರಿಕೆಯಿಂದ ಜನಸಾಮಾನ್ಯರು ಸಮಸ್ಯೆ ಅನುಭವಿಸುತ್ತಿದ್ದು, ಈ ಮಧ್ಯೆ ಬಂದ್ ಮಾಡುವ ಮೂಲಕ ಜನರಿಗೆ ಸಂಕಷ್ಟ ಎದುರಾಗುವಂತೆ ಮಾಡುತ್ತಿದ್ದು ಬಂದ್ ವಾಪಸ್ ಪಡೆಯಬೇಕು,ದಿ. ೯ರ ವಾಪಸ್ ಪಡೆಯದೇ ಹೋದಲ್ಲಿ ಅದಕ್ಕೆ ಪ್ರತಿಯಾಗಿ ಬಿಜೆಪಿಯಿಂದ ಬಂದ್ ಕರೆ ನೀಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಸಿಎಂ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ನಡುವೆ ಒಳ ಜಗಳ ಆರಂಭಗೊಂಡಿದೆ.ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಆಗಬೇಕೆಂದು ಕನಸು ಕಾಣುತ್ತಿದ್ದಾರೆ.ಅದು ಕನಸಾಗಿಯೇ ಉಳಿದು ಹೋಗಲಿದೆ
ಸಿದ್ದರಾಮಯ್ಯನವರ ಅಧಿಕಾರದ ಅವಧಿ ಮುಗಿಯುವ ಹಂತಕ್ಕೆ ಬಂದಿದೆ ಹೀಗಾಗಿ ಕಾಂಗ್ರೆಸ್ನ ಒಬ್ಬೊಬ್ಬ ನಾಯಕರು ಔತಣ ಕೂಟವನ್ನ ಏರ್ಪಡಿಸುತ್ತಿದ್ದಾರೆಂದರು.
ಎಸ್.ಎಂ.ಕೃಷ್ಣ ಅವರ ಮನೆ ಬಾಗಿಲು ಒದ್ದು ಅಧಿಕಾರ ಪಡೆದುಕೊಂಡಿದ್ದೆ ಎಂದು ಡಿ.ಕೆ.ಶಿ ಹೇಳಿದ್ದಾರೆ.
ಅದರಂತೆಯೇ ಅವರು ಸಿದ್ದರಾಮಯ್ಯನವರ ಮನೆ ಬಾಗಿಲು ಒದ್ದು ಮುಖ್ಯಮಂತ್ರಿ ಆಗಲು ಹೊರಟಿದ್ದಾರೆ
ಸುದ್ದಿಗೋಷ್ಠಿಯಲ್ಲಿ ಉಪಮೇಯರ್ ದುರ್ಗಮ್ಮ ಬಿಜವಾಡ, ಮುಖಂಡರಾದ ಸಂತೋಷ ಅರಕೇರಿ, ದತ್ತಮೂರ್ತಿ ಕುಲಕರ್ಣಿ, ಮಹೇಂದ್ರ ಕೌತಾಳ, ರವಿ ನಾಯಕ, ಪರಶುರಾಮ ಪೂಜಾರ, ನಾಗರಾಜ ಟಗರಗುಂಟಿ ಇನ್ನಿತರರಿದ್ದರು.
ವರದಿ : ಸುಧೀರ ಕುಲಕರ್ಣಿ