ಸೂರತ್: ಗುಜರಾತ್ ನ ಸೂರತ್ ನಲ್ಲಿ ಬಿಜೆಪಿ ಮಹಿಳಾ ಘಟಕದ ನಾಯಕಿ ತನ್ನ ನಿವಾಸದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಬಿಜೆಪಿ ವಾರ್ಡ್ ಮಟ್ಟದ ನಾಯಕಿ ದೀಪಿಕಾ ಪಟೇಲ್ ಸೂರತ್ ನಗರದ ಅಲ್ತಾನ್ ವಾರ್ಡ್ ನಂ.30ರ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆಯಾಗಿದ್ದರು.
34 ವರ್ಷದ ಬಿಜೆಪಿ ಮಹಿಳಾ ನಾಯಕಿ ದೀಪಿಕಾ ಪಟೇಲ್ ಅವರು ತಮ್ಮ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆದರೆ ದೀಪಿಕಾ ಅವರ ಕುಟುಂಬಸ್ಥರು ಆಕೆಯ ಕೊಲೆ ಶಂಕೆ ವ್ಯಕ್ತಪಡಿಸಿದ್ದಾರೆ. ಅಲ್ಥಾನ್ ಪೊಲೀಸ್ ಠಾಣಾ ವ್ಯಾಪ್ತಿಯ ಭೀಮ್ರಾಡ್ ಗ್ರಾಮದಲ್ಲಿರುವ ತನ್ನ ಮನೆಯಲ್ಲಿ ಆಕೆ ಸಾವನ್ನಪ್ಪಿದ್ದಾಳೆ.
ಆತ್ಮಹತ್ಯೆ ಸುದ್ದಿ ತಿಳಿಯುತ್ತಿದ್ದಂತೆ ಪೊಲೀಸರ ತಂಡ ಸ್ಥಳಕ್ಕೆ ಆಗಮಿಸಿದೆ. ಬಿಜೆಪಿ ನಾಯಕಿ ದೀಪಿಕಾ ಪಟೇಲ್ ಮೃತದೇಹವನ್ನು ಪೊಲೀಸರು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಆದರೆ, ಇದೊಂದು ಕೊಲೆ ಎಂದು ಮೃತ ಬಿಜೆಪಿ ಮುಖಂಡನ ಸಂಬಂಧಿಕರು ಆರೋಪಿಸಿದ್ದಾರೆ.
ಈ ಸಂಬಂಧ ತನಿಖೆ ನಡೆಯುತ್ತಿದೆ. ಬಿಜೆಪಿ ನಾಯಕಿ ದೀಪಿಕಾ ಪಟೇಲ್ ಆತ್ಮಹತ್ಯೆ ಮಾಡಿಕೊಂಡಿರುವ ಕಾರಣ ಇನ್ನೂ ತಿಳಿದುಬಂದಿಲ್ಲ.