ಬೆಂಗಳೂರು : ರಾಜ್ಯ ಸರ್ಕಾರದ ಬೆಲೆ ಏರಿಕೆ ನೀತಿ ವಿರುದ್ಧ ಕೇಸರಿ ಪಡೆ ರೊಚ್ಚಿಗೆದ್ದಿದ್ದು, ಇಂದಿನಿಂದ ರಾಜ್ಯಾಧ್ಯಕ್ಷ ವಿಜಯೇಂದ್ರ ನೇತೃತ್ವದಲ್ಲಿ ಅಹೋರಾತ್ರಿ ಧರಣಿ ನಡೆಸಲಾಗುತ್ತಿದೆ.
ಮೆಟ್ರೋ, ಹಾಲು , ವಿದ್ಯುತ್ ಸೇರಿದಂತೆ ಎಲ್ಲಾ ಬೆಲೆಗಳು ಗಗನಕ್ಕೇರಿದ್ದು, ರಾಜ್ಯದ ಜನರು ಕಂಗಾಲಾಗಿದ್ದಾರೆ. ಹೀಗಾಗಿಸರ್ಕಾರದ ಬೆಲೆ ಏರಿಕೆ ಕ್ರಮ ವಿರೋಧಿಸಿ ಸರ್ಕಾರದ ವಿರುದ್ಧ ರಾಜ್ಯ ವ್ಯಾಪಿ ಸರಣಿ ಪ್ರತಿಭಟನೆಗೆ ಬಿಜೆಪಿ ಸಿದ್ಧತೆ ನಡೆಸಿದ್ದು, ಇಂದಿನಿಂದ ರಾಜ್ಯಾಧ್ಯಕ್ಷ ವಿಜಯೇಂದ್ರ ನೇತೃತ್ವದಲ್ಲಿ ಧರಣಿ ಆರಂಭವಾಗಲಿದೆ.
ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ಬೆಳಿಗ್ಗೆ 11 ರಿಂದ ಅಹೋರಾತ್ರಿ ಧರಣಿ ಆರಂಭವಾಗಲಿದ್ದು, ಈ ಧರಣಿಯಲ್ಲಿ ಎಲ್ಲ ಶಾಸಕರು, ವಿಧಾನಪರಿಷತ್ ಸದಸ್ಯರು, ಪದಾಧಿಕಾರಿಗಳು ಭಾಗವಹಿಸಲಿದ್ದಾರೆ.
ಹಾಗೆಯೇ ಏ. 5 ರಂದು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರ, ತಾಲ್ಲೂಕು ಕೇಂದ್ರ ಮತ್ತು ಮಂಡಲ ಮಟ್ಟದಲ್ಲಿ ಕಾರ್ಯಕರ್ತರು ಬೀದಿಗಿಳಿದು ಪ್ರತಿಭಟಿಸಲಿದ್ದಾರೆ.ಬೆಲೆ ಏರಿಕೆ ವಿಚಾರ ರಾಜ್ಯದಲ್ಲಿ ದೊಡ್ಡ ಸಂಘರ್ಷಕ್ಕೆ ಕಾರಣವಾಗಿದೆ. ಈ ಮಧ್ಯೆ ಬಿಜೆಪಿ ಅಹೋರಾತ್ರಿ ಧರಣಿಗೆ ಮುಂದಾಗಿದೆ.