Ad imageAd image

ದೈವನಿಂದನೆ ಪ್ರಕರಣ : ನಟ ರಣವೀರ್ ಸಿಂಗ್ ಗೆ ನೋಟಿಸ್ 

Bharath Vaibhav
ದೈವನಿಂದನೆ ಪ್ರಕರಣ : ನಟ ರಣವೀರ್ ಸಿಂಗ್ ಗೆ ನೋಟಿಸ್ 
WhatsApp Group Join Now
Telegram Group Join Now

ಬೆಂಗಳೂರು: ‘ಕಾಂತಾರ ಚಾಪ್ಟರ್ 1’ ಚಿತ್ರದಲ್ಲಿ ರಿಷಬ್ ಶೆಟ್ಟಿ ನಟನೆ ಹೊಗಳುವಾಗ ದೈವನಿಂದನೆ ಮಾಡಿದ ಪ್ರಕರಣದಲ್ಲಿ ನಟ ರಣವೀರ್ ಸಿಂಗ್ ಅವರಿಗೆ ನೋಟಿಸ್ ನೀಡಲಾಗಿದೆ.

ಆದರೆ, ನೋಟಿಸ್ ನೀಡಿದ್ದರೂ ಉತ್ತರ ನೀಡದ ಹಿನ್ನೆಲೆಯಲ್ಲಿ ಹೈಗ್ರೌಂಡ್ಸ್ ಠಾಣೆ ಪೋಲೀಸರು ಕಾನೂನು ಮೊರೆ ಹೋಗಲು ಮುಂದಾಗಿದ್ದಾರೆ.

ಗೋವಾದಲ್ಲಿ ನಡೆದ ಚಲನಚಿತ್ರೋತ್ಸವದಲ್ಲಿ ರಿಷಬ್ ಶೆಟ್ಟಿ ಅಭಿನಯದ ಕುರಿತಾಗಿ ಮಾತನಾಡುವಾಗ ದೈವದ ವಿಚಾರವಾಗಿ ರಣವೀರ್ ಸಿಂಗ್ ಅವಹೇಳನ ಮಾಡಿದ್ದಾರೆ ಎಂದು ಎಫ್‌ಐಆರ್ ದಾಖಲಿಸಲಾಗಿತ್ತು.

ವಕೀಲ ಪ್ರಶಾಂತ್ ನೀಡಿದ ದೂರಿನ ಮೇರೆಗೆ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿ ಎರಡು ಬಾರಿ ನೋಟಿಸ್ ನೀಡಲಾಗಿದೆ. ಆದರೆ ನೋಟಿಸ್ ಗೆ ಯಾವುದೇ ರೀತಿಯ ಉತ್ತರ ನೀಡಿಲ್ಲ. ಹೀಗಾಗಿ ಮತ್ತೊಮ್ಮೆ ನೋಟಿಸ್ ನೀಡಿ ಕಾನೂನು ಕ್ರಮ ಕೈಗೊಳ್ಳಲು ಪೊಲೀಸರು ಮುಂದಾಗಿದ್ದಾರೆ.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!