ಪಾಕಿಸ್ತಾನ: ರಾಜಧಾನಿ ಇಸ್ಲಾಮಾಬಾದ್ನಲ್ಲಿರುವ ಶಿಯಾ ಮುಸ್ಲಿಂ ಮಸೀದಿಯಲ್ಲಿ ಶುಕ್ರವಾರ ಸಂಭವಿಸಿದ ಸ್ಫೋಟದಲ್ಲಿ ಕನಿಷ್ಠ 12 ಜನರು ಸಾವನ್ನಪ್ಪಿದ್ದಾರೆ.
ಫೆಡರಲ್ ರಾಜಧಾನಿಯ ಶೆಹಜಾದ್ ಟೌನ್ ಪ್ರದೇಶದ ತರ್ಲೈ ಇಮಾಮ್ಬರ್ಗಾದಲ್ಲಿ ಸ್ಫೋಟ ಸಂಭವಿಸಿದೆ ಎಂದು ಡಾನ್ ಪತ್ರಿಕೆ ವರದಿ ಮಾಡಿದೆ.
ಶುಕ್ರವಾರದ ಪ್ರಾರ್ಥನೆಯ ಸಮಯದಲ್ಲಿ ಸ್ಫೋಟವು ಮಸೀದಿಯನ್ನು ನಡುಗಿಸಿತು ಎಂದು ಪೊಲೀಸ್ ಅಧಿಕಾರಿ ಜಾಫರ್ ಇಕ್ಬಾಲ್ ಹೇಳಿದ್ದಾರೆ. “ನಾವು ಹಲವಾರು ಜನರನ್ನು ಆಸ್ಪತ್ರೆಗಳಿಗೆ ಸ್ಥಳಾಂತರಿಸಿದ್ದೇವೆ.
ಈ ಸಮಯದಲ್ಲಿ ಎಷ್ಟು ಮಂದಿ ಸತ್ತಿದ್ದಾರೆಂದು ನಾನು ಹೇಳಲಾರೆ, ಆದರೆ ಹೌದು ಜನರು ಸಾವನ್ನಪ್ಪಿದ್ದಾರೆ” ಎಂದು ಅವರು ಹೇಳಿದರು.




