Join The Telegram | Join The WhatsApp |
ಹುಬ್ಬಳ್ಳಿ: ಧಾರವಾಡ ಜಿಲ್ಲೆ ಹುಬ್ಬಳ್ಳಿ ತಾಲೂಕಿನ ಬ್ಯಾಹಟ್ಟಿ ಗ್ರಾಮದ ಕೆರೆಯಲ್ಲಿ ಇಬ್ಬರು ಮಹಿಳೆಯರ ವಶ ಪತ್ತೆಯಾಗಿದೆ. ಇವರಿಬ್ಬರೂ ತಾಯಿ-ಮಗಳಾಗಿದ್ದು, ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ.
ಬ್ಯಾಹಟ್ಟಿ ಗ್ರಾಮದ ಹೊರವಲಯದ ಕೆರೆಯಲ್ಲಿ ಶವಗಳು ತೇಲುತ್ತಿರುವುದನ್ನು ಕಂಡು ಗ್ರಾಮಸ್ಥರು ಪೊಲೀಸರಿಗೆ ಮಾಹಿತಿ ನೀಡಿದರು.
ಪೊಲೀಸರು ಸಹಾಯದಿಂದ ಅವುಗಳನ್ನು ಮೇಲೆತ್ತಿದಾಗ ಅದು ತಾಯಿ ಮಕ್ತುಮ್‌ಬಿ (50) ಮಗಳು ಶಹನಾಜ್ (22) ಅವರ ಶವ ಎನ್ನುವುದು ಪತ್ತೆಯಾಯಿತು.
ಶವಗಳನ್ನು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದ್ದು, ಇದು ಆತ್ಮಹತ್ಯೆಯೇ, ಕೊಲೆಯೇ ಎನ್ನುವುದು ಮರಣೋತ್ತರ ಪರೀಕ್ಷೆ ಬಳಿಕ ತಿಳಿದುಬರಲಿದೆ. ಹುಬ್ಬಳ್ಳಿ ಗ್ರಾಮೀಣ ಠಾಣೆ ಪೋಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.
Join The Telegram | Join The WhatsApp |