ರಾಜವಂಶ ಪಟೌಡಿ ಕುಡಿ, ಬಾಲಿವುಡ್ ನಟಿ ಸಾರಾ ಅಲಿ ಖಾನ್ ಇತ್ತೀಚೆಗೆ ಆಧ್ಯಾತ್ಮಿಕ ಪ್ರವಾಸ ಕೈಗೊಂಡಿದ್ದು, ಗುವಾಹಟಿಯ ಕಾಮಾಕ್ಯ ದೇವಸ್ಥಾನಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು. ಅಲ್ಲದೆ, ಹುಬ್ಬಳ್ಳಿಯ ಉಣಕಲ್ನಲ್ಲಿರುವ ಐತಿಹಾಸಿಕ ಚಂದ್ರಮೌಳೇಶ್ವರ ದೇವಸ್ಥಾನಕ್ಕೂ ಭೇಟಿ ನೀಡಿದ್ದರು.
ಗುವಾಹಟಿಯ ಕಾಮಾಕ್ಯ ದೇವಸ್ಥಾನಕ್ಕೆ ಭೇಟಿ: ಸಾರಾ ತಮ್ಮ ಇತ್ತೀಚಿನ ಧಾರ್ಮಿಕ ಪ್ರವಾಸದ ಫೋಟೋಗಳನ್ನು ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡಿದ್ದು, ಅಪಾರ ಸಂಖ್ಯೆಯ ಅಭಿಮಾನಿಗಳಿಗೆ ಪವಿತ್ರ ಸ್ಥಳದಲ್ಲಿನ ತಮ್ಮ ಶಾಂತಿಯುತ ಕ್ಷಣಗಳ ಒಂದು ನೋಟವನ್ನೊದಗಿಸಿದ್ದಾರೆ. ಬಾಲಿವುಡ್ ಬೆಡಗಿ ವೈಡ್ ಸಲ್ವಾರ್ ಕುರ್ತಾ ಧರಿಸಿ ಬಹಳ ಸೊಗಸಾಗಿ ಕಾಣಿಸಿಕೊಂಡಿದ್ದಾರೆ. ಹಣೆ ತುಂಬಾ ಕುಂಕುಮ ಹಚ್ಚಿ, ಬಹಳ ಸಾಂಪ್ರದಾಯಿಕ ನೋಟ ಬೀರಿದ್ದಾರೆ. ಸರಣಿ ಫೋಟೋಗಳನ್ನು ಪೋಸ್ಟ್ ಮಾಡಿ, ಸುಂದರ ಕ್ಯಾಪ್ಷನ್ ಸಹ ಕೊಟ್ಟಿದ್ದಾರೆ. ಫೋಟೋಗಳು ಆನ್ಲೈನ್ನಲ್ಲಿ ವೈರಲ್ ಆಗುತ್ತಿದ್ದು, ಅಭಿಮಾನಿಗಳು ಪ್ರೀತಿಯ ಧಾರೆಯೆರೆಯುತ್ತಿದ್ದಾರೆ.
ಹುಬ್ಬಳ್ಳಿಯ ಚಂದ್ರಮೌಳೇಶ್ವರ ದೇವಸ್ಥಾನಕ್ಕೆ ಭೇಟಿ: ಕಲ್ಯಾಣ ಚಾಲುಕ್ಯರಿಂದ ನಿರ್ಮಾಣಗೊಂಡ ಮತ್ತು ಅಮರ ಶಿಲ್ಪಕಲೆಗೆ ಪ್ರಸಿದ್ಧಿ ಪಡೆದಿರುವ ದೇಗುಲಗಳು ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿವೆ. ಇತ್ತೀಚೆಗೆ ನಟಿ ಖಾನ್, ಉಣಕಲ್ನಲ್ಲಿರುವ ಪ್ರಸಿದ್ಧ ಚಂದ್ರಮೌಳೇಶ್ವರ ದೇವಸ್ಥಾನಕ್ಕೆ ಬಂದಿದ್ದರು. ಶಾಸಕ ಮಹೇಶ್ ಟೆಂಗಿನಕಾಯಿ ಫೋಟೋ ಹಂಚಿಕೊಂಡು ತಮ್ಮ ಮೆಚ್ಚುಗೆ ವ್ಯಕ್ತಪಡಿಸಿದ್ದರು. ಫೋಟೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿ, ಅಭಿಮಾನಿಗಳ ಪ್ರಶಂಸೆಗೆ ಪಾತ್ರವಾಗಿದೆ.