Join The Telegram | Join The WhatsApp |
ಮಂಗಳೂರು: ಕಡಲ ನಗರಿ ಮಂಗಳೂರಿಗೆ ಅಗಮಿಸಿದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಸಿಎಂ ಬಸವರಾಜ್ ಬೊಮ್ಮಾಯಿ ಕೇಸರಿ ಶಾಲು ಹೊದಿಸಿ ಸ್ವಾಗತಿಸಿದರು. ಮಂಗಳೂರಿನ ಬಜ್ಫೆ ವಿಮಾನ ನಿಲ್ದಾಣಕ್ಕೆ ವಿಶೇಷ ವಿಮಾನದಲ್ಲಿ ಬಂದಿಳಿದ ಪ್ರಧಾನಿ ಮೋದಿಯವರನ್ನು ಸಿಎಂ ಬಸವರಾಜ್ ಬೊಮ್ಮಾಯಿ ಆತ್ಮೀಯವಾಗಿ ಬರಮಾಡಿಕೊಂಡರು. ಬಳಿಕ ಅಲ್ಲಿಂದ ಕೂಳೂರಿನ ಗೋಲ್ಡ್ ಪಿಂಚ್ ಸಿಟಿ ಮೈದಾನಕ್ಕೆ ಬಿಗಿ ಭದ್ರತೆಯಲ್ಲಿ ಪ್ರಧಾನಿ ಮೋದಿ ತೆರಳಿದ್ದಾರೆ. ಪ್ರಧಾನಿ ಮೋದಿ ಭದ್ರತೆಗಾಗಿ ಮಂಗಳೂರಿನಲ್ಲಿ 300ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿದೆ. ಗೋಲ್ಡ್ ಪಿಂಚ್ ಮೈದಾನ ಸಂಪೂರ್ಣ ಕೇಸರಿಮಯವಾಗಿದ್ದು ಒಂದು ಲಕ್ಷಕ್ಕೂ ಅಧಿಕ ಜನರು ಸಮಾವೇಶದಲ್ಲಿ ಭಾಗವಹಿಸುವ ನಿರೀಕ್ಷೆ ಇದೆ. ಕಂಟೇನರ್ ಗಳು ಹಾಗೂ ಇತರೆ ಸರಕು ನಿರ್ವಹಣೆಗಾಗಿ ಬರ್ತ್ ಸಂಖ್ಯೆ 14 ಯಾಂತ್ರೀಕರಣ, ಬಿಎಸ್ ಗಿ I ಉನ್ನತೀಕರಣ ಯೋಜನೆ, ಸಮುದ್ರ ನೀರಿನ ನಿರ್ಮಲಿಕರಣ ಘಟಕ ಸೇರಿದಂತೆ 3,800 ಕೋಟಿ ಯೋಜನೆಗಳಿಗೆ ಪ್ರಧಾನಿ ಮೋದಿ ಚಾಲನೆ ನೀಡಲಿದ್ದಾರೆ.
Join The Telegram | Join The WhatsApp |