ಬೆಂಗಳೂರು : ರಾಜ್ಯ ಸರ್ಕಾರದಿಂದ ನಾಳೆಯಿಂದಲೇ ಬಿಪಿಎಲ್ ಕಾರ್ಡ್ ಪರಿಷ್ಕರಣೆ ಆರಂಭವಾಗಲಿದೆ ಎಂದು ಸರ್ಕಾರ ಮಾಹಿತಿ ನೀಡಿದೆ.
ಮೊದಲು ಬೆಂಗಳೂರು ವ್ಯಾಪ್ತಿಯಲ್ಲಿ ಬಿಪಿಎಲ್ ಕಾರ್ಡ್ ಪರಿಷ್ಕರಣೆ ಆರಂಭವಾಗಲಿದೆ. ಐಟಿ ಹೆಸರಿನಲ್ಲಿ ರದ್ದಾಗಲಿರುವ ಬಿಪಿಎಲ್ ಕಾರ್ಡ್ ಪರಿಷ್ಕರಣೆ ಮಾಡಲಾಗುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಅನರ್ಹರ ಬಿಪಿಎಲ್ ಕಾರ್ಡ್ ಗಳನ್ನು ಮಾತ್ರ ರದ್ದು ಮಾಡಲಾಗುವುದು. ಅರ್ಹ ಬಡವರಿಗೆ ಕಾರ್ಡ್ ತಪ್ಪಿಸುವುದಿಲ್ಲ. ಅನ್ನಭಾಗ್ಯ ಯೋಜನೆಯನ್ನು ಜಾರಿ ಮಾಡಿದ್ದು ನಾವೇ ಹೊರತು, ಬಿಜೆಪಿಯಾಗಲಿ, ಜೆಡಿಎಸ್ ಆಗಲಿ ನೀಡಿಲ್ಲ. ಕಾರ್ಯಕ್ರಮ ಜಾರಿ ಮಾಡಿದ್ದು ಈ ಸಿದ್ದರಾಮಯ್ಯ. 2017ರಲ್ಲಿ 1 ರೂಪಾಯಿಗೆ ನೀಡುತ್ತಿದ್ದ ಅಕ್ಕಿಯನ್ನು ಉಚಿತವಾಗಿ ನೀಡಲಾಯಿತು.
ಇದನ್ನು ಬಿಜೆಪಿ ಮಾಡಿಲ್ಲ. ಸುಮ್ಮನೆ ಮಾತನಾಡುತ್ತಾರೆ. ಬಿಜೆಪಿ ಅಧಿಕಾರದಲ್ಲಿರುವ ಯಾವ ರಾಜ್ಯದಲ್ಲಿ ಇಂಥಾ ಯೋಜನೆಯನ್ನು ಜಾರಿ ಮಾಡಿದ್ದಾರೆ.
ಗುಜರಾತ್, ಮಧ್ಯಪ್ರದೇಶ, ಬಿಹಾರ, ಉತ್ತರ ಪ್ರದೇಶ, ಹರಿಯಾಣ ಎಲ್ಲಿ ಮಾಡಿದ್ದಾರೆ? ಕೇಂದ್ರ ಸಚಿವ ಕುಮಾರಸ್ವಾಮಿ ಅವರು ಸರ್ಕಾರ ಕೇವಲ ಗ್ಯಾರಂಟಿ ಎನ್ನುತ್ತಿದೆ, ತೆರಿಗೆ ಹಣ ಎಲ್ಲಿ ಹೋಗುತ್ತಿದೆ ಎಂದು ಪ್ರಶ್ನಿಸಿದ್ದಾರೆ.




