ನವದೆಹಲಿ: ನ್ಯಾಯಮೂರ್ತಿ ಭೂಷಣ್ ರಾಮಕೃಷ್ಣ ಗವಾಯಿ ಅವರು ಮೇ 14 ರಂದು ಭಾರತದ ಮುಂದಿನ ಮುಖ್ಯ ನ್ಯಾಯಮೂರ್ತಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ಇಂದು ಸಿಜೆಐ ಸಂಜೀವ್ ಖನ್ನಾ ಅವರು ಕೇಂದ್ರ ಕಾನೂನು ಸಚಿವಾಲಯಕ್ಕೆ ಸುಪ್ರೀಂ ಕೋರ್ಟ್‌ನ ಹಿರಿಯ ನ್ಯಾಯಾಧೀಶ ಬಿ.ಆರ್. ಗವಾಯಿ ಅವರನ್ನು ಮುಂದಿನ ಸಿಜೆಐ ಆಗಿ ನೇಮಿಸಲು ಶಿಫಾರಸು ಮಾಡಿದ್ದಾರೆ. ಸಿಜೆಐ ಖನ್ನಾ ಅವರು ಮೇ 13 ರಂದು ನಿವೃತ್ತರಾಗಲಿದ್ದಾರೆ.
ಜಮ್ಮು ಮತ್ತು ಕಾಶ್ಮೀರದ 370 ನೇ ವಿಧಿಯನ್ನು ರದ್ದುಪಡಿಸುವುದು ಮತ್ತು ಅದನ್ನು ಕೇಂದ್ರಾಡಳಿತ ಪ್ರದೇಶಗಳಾಗಿ ವಿಭಜಿಸುವುದು ನ್ಯಾಯಮೂರ್ತಿ ಗವಾಯಿ ಅವರ ವೃತ್ತಿಜೀವನದ ಗಮನಾರ್ಹ ತೀರ್ಪುಗಳಲ್ಲಿ ಒಂದಾಗಿದೆ.
2007 ರಲ್ಲಿ ನ್ಯಾಯಮೂರ್ತಿ ಕೆ.ಜಿ. ಬಾಲಕೃಷ್ಣನ್ ಅವರ ನೇಮಕದ ನಂತರ, ನ್ಯಾಯಮೂರ್ತಿ ಗವಾಯಿ ಅವರು ಈ ಹುದ್ದೆಯನ್ನು ಅಲಂಕರಿಸುತ್ತಿರುವ ಎರಡನೇ ದಲಿತರಾಗಲಿದ್ದಾರೆ. ಇವರು ಮಹಾರಾಷ್ಟ್ರದ ಅಮರಾವತಿ ಮೂಲದವರು.