ಬೆಂಗಳೂರು : ಸಿಇಟಿ ಪರೀಕ್ಷೆ ವೇಳೆ ಜನಿವಾರ ತೆಗೆಸಿದ ಪ್ರಕರಣದ ಕುರಿತು ಬಿಗ್ ಅಪ್ಡೇಟ್ ಬಂದಿದ್ದು, ಇದೀಗ ಕೇಸ್ ನ್ಯಾಯಾಲಯದ ಮೆಟ್ಟಿಲೇರಿದೆ. ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭೆಯು ಸಿಇಟಿ ಪರೀಕ್ಷೆ ವೇಳೆ ವಿದ್ಯಾರ್ಥಿಗಳ ಜನಿವಾರ ತೆಗೆದ ಘಟನೆಯನ್ನು ಖಂಡಿಸಿ ಹೈಕೋರ್ಟ್‌ಗೆ ಪಿಐಎಲ್ ಸಲ್ಲಿಸಿದೆ.
ರಾಜ್ಯದ ಹಲವೆಡೆ ಇಂತಹ ಘಟನೆಗಳು ನಡೆದಿರುವುದರಿಂದ ಶಿಕ್ಷಣ ಹಕ್ಕು ಉಲ್ಲಂಘನೆಯಾಗಿದೆ. ಪರೀಕ್ಷೆಯಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳಿಗೆ ಮರು ಪರೀಕ್ಷೆ ನಡೆಸುವಂತೆ ಮನವಿ ಮಾಡಲಾಗಿದೆ.
ಘಟನೆ ಖಂಡಿಸಿ ಬ್ರಾಹ್ಮಣ ರಾಜ್ಯದೆಲ್ಲೆಡೆ ಸಮುದಾಯ ಬೀದಿಗಿಳಿದಿತ್ತು. ಶಿವಮೊಗ್ಗ, ಬೀದರ್, ಧಾರವಾಡ, ಸಾಗರದಲ್ಲಿ ಜನಿವಾರ ತೆಗೆಸಿದನ್ನ ವಿರೋಧಿಸಿ ಪ್ರತಿಭಟನೆ ಮಾಡಲಾಗಿತ್ತು. ಇದೀಗ ಪ್ರಕರಣಕ್ಕೆ ಸಂಬಂಧಿಸಿದಂತೆ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದಿಂದ ಹೈಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿದೆ.
ಸಂವಿಧಾನಬಾಹಿರ ಕೃತ್ಯದಿಂದ ಶಿಕ್ಷಣ ಹಕ್ಕು ವಂಚನೆಯಾಗಿದೆ. ಈ ವಿದ್ಯಾರ್ಥಿಗಳಿಗೆ ಮರು ಸಿಇಟಿ ಪರೀಕ್ಷೆ ನಡೆಸುವಂತೆ ಅರ್ಜಿದಾರರ ಪರ ಹಿರಿಯ ವಕೀಲ ಎಸ್.ಶ್ರೀರಂಗ ಮನವಿ ಮಾಡಿದ್ದಾರೆ.